Saturday, July 4, 2026
Google search engine

Homeಅಪರಾಧಬೆಂಗಳೂರು ಪೂರ್ವ ವಿಭಾಗದಲ್ಲಿ ಸಿಸಿಬಿ ದಾಳಿ : 30ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಪರಿಶೀಲನೆ

ಬೆಂಗಳೂರು ಪೂರ್ವ ವಿಭಾಗದಲ್ಲಿ ಸಿಸಿಬಿ ದಾಳಿ : 30ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಪರಿಶೀಲನೆ

ಬೆಂಗಳೂರು : ನಗರದ ಪೂರ್ವ ವಿಭಾಗದಲ್ಲಿ ರೌಡಿಶೀಟರ್‌ಗಳ ವಿರುದ್ಧ ಸಿಸಿಬಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, 30ಕ್ಕೂ ಹೆಚ್ಚು ಮಂದಿಯ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಸಿಸಿಬಿ ಡಿಸಿಪಿ ಶ್ರೀಹರಿಬಾಬು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ರೌಡಿಶೀಟರ್‌ಗಳ ಮನೆಗಳು ಹಾಗೂ ಅನುಮಾನಾಸ್ಪದ ವ್ಯಕ್ತಿಗಳ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿದ್ದು, ಇದೇ ವೇಳೆ ಇಂದಿರಾನಗರ ನಿವಾಸಿ ಪ್ರಭಾಕರ್ ಎಂಬಾತನ ಮನೆಯಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರ ಜೊತೆಗೆ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಅವರಿಗೆ ಸೇರಿದ ವಾಹನಗಳ ತಪಾಸಣೆಯನ್ನೂ ಪೊಲೀಸರು ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಹಲವು ಮನೆಗಳಲ್ಲಿ ದಾಖಲೆಗಳು ಮತ್ತು ಇತರ ವಸ್ತುಗಳನ್ನೂ ಪರಿಶೀಲಿಸಲಾಗಿದೆ.

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲೂ ಇಂತಹ ತಪಾಸಣೆ ಮತ್ತು ದಾಳಿಗಳು ಮುಂದುವರಿಯಲಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

RELATED ARTICLES
- Advertisment -
Google search engine

Most Popular