Monday, July 6, 2026
Google search engine

Homeರಾಜಕೀಯಆಗಸ್ಟ್ ತಿಂಗಳಿಗೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ : ಸಚಿವ ರಾಮಲಿಂಗಾರೆಡ್ಡಿ

ಆಗಸ್ಟ್ ತಿಂಗಳಿಗೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ರಾಜ್ಯ ಸಚಿವ ಸಂಪುಟದ ವಿಸ್ತರಣೆ ಆಗಸ್ಟ್ ತಿಂಗಳಿಗೂ ಮುನ್ನವೇ ನಡೆಯುವ ಸಾಧ್ಯತೆ ಇದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಅಧಿವೇಶನ ಆರಂಭಕ್ಕೂ ಮುನ್ನ ಸಂಪೂರ್ಣ ಸಚಿವ ಸಂಪುಟ ಅಸ್ತಿತ್ವದಲ್ಲಿರಬೇಕಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದರು.

ಪ್ರಸ್ತುತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಳಿ ಸುಮಾರು 20 ಇಲಾಖೆಗಳ ಜವಾಬ್ದಾರಿಯಿದ್ದು, ಆಗಸ್ಟ್‌ನಲ್ಲಿ ವಿಧಾನಸಭೆ ಅಧಿವೇಶನ ನಡೆಯಲಿರುವುದರಿಂದ ಅದರೊಳಗೆ ಸಚಿವ ಸಂಪುಟವನ್ನು ಪೂರ್ಣಗೊಳಿಸುವ ಅಗತ್ಯವಿದೆ ಎಂದು ತಿಳಿಸಿದರು.

ಇದೇ ವೇಳೆ ಕರ್ನಾಟಕ ಸಚಿವ ಸಂಪುಟದ ವಿಸ್ತರಣೆ ಕುರಿತು ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳಲಿದೆ ಎಂದು ಡಿ.ಕೆ.ಶಿವಕುಮಾರ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಮುಖ್ಯಮಂತ್ರಿ ಸೇರಿದಂತೆ ರಾಜ್ಯ ಸಚಿವ ಸಂಪುಟದಲ್ಲಿ 14 ಸಚಿವರಿದ್ದು, ಸಂವಿಧಾನದ ಪ್ರಕಾರ ಕರ್ನಾಟಕದಲ್ಲಿ ಒಟ್ಟು 34 ಸಚಿವರನ್ನು ನೇಮಕ ಮಾಡಲು ಅವಕಾಶವಿದೆ. ಉಳಿದ ಸ್ಥಾನಗಳ ಭರ್ತಿಗಾಗಿ ಹಲವು ಕಾಂಗ್ರೆಸ್ ಶಾಸಕರು ತೀವ್ರ ಲಾಬಿ ನಡೆಸುತ್ತಿದ್ದು, ಕೆಲವರು ಇತ್ತೀಚೆಗೆ ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

RELATED ARTICLES
- Advertisment -
Google search engine

Most Popular