Monday, July 6, 2026
Google search engine

Homeಸ್ಥಳೀಯಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಕ್ರಮ : ಶಾಸಕ ಸಿ.ಪುಟ್ಟರಂಗಶೆಟ್ಟಿ

ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಕ್ರಮ : ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ : ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಈಜುಕೊಳ, ಪೆವಿಲಿಯನ್ ಹಾಗೂ ವಿವಿಧ ಅಂಕಣಗಳ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
15 ಕೋಟಿ ವೆಚ್ಚದಲ್ಲಿ ಈಜುಕೊಳ, ಪೆವಿಲಿಯನ್ ಸೇರಿದಂತೆ ಇತರೆ ಕಾಮಗಾರಿಗಳನ್ನು ಮಾಡಲಾಗುವುದು. ಈಗಾಗಲೇ 11 ಕೋಟಿಗೆ ಟೆಂಡರ್ ಆಗಿದೆ. ಈಗಾಗಲೇ ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಹಾಸ್ಟೆಲ್‌ಗಳನ್ನು ನಿರ್ಮಿ ಸಲಾಗಿದೆ ಎಂದರು.ಕ್ರೀಡಾಂಗಣಕ್ಕೆ ಬೇಕಾದ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವ ಮೂಲಕ ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು.

110 ಕೋಟಿ ವೆಚ್ಚದಲ್ಲಿ ಮಾಲಂಗಿಯಿಂದ ಚಾಮರಾಜನಗರಕ್ಕೆ ಕುಡಿಯುವ ನೀರು ಪೂರೈಕೆ ಯೋಜನೆಗೆ ಟೆಂಡರ್ ಆಗಿದೆ. ಜೊತೆಗೆ 130 ಕೋಟಿ ವೆಚ್ಚದಲ್ಲಿ ಯುಜಿಡಿ ನಿರ್ಮಾಣಕ್ಕೂ ಕೂಡ ಟೆಂಡರ್ ಆಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾಧಿಕಾರಿ ಶ್ರೀರೂಪ, ಕ್ರೀಡಾ ತರಬೇತುದಾರ ವಿ.ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಇತರರಿದ್ದರು.

RELATED ARTICLES
- Advertisment -
Google search engine

Most Popular