Tuesday, July 7, 2026
Google search engine

Homeರಾಜ್ಯದೇವರಾಜ ಅರಸು ಅಭಿವೃದ್ಧಿ ನಿಗಮದಲ್ಲಿ ಭಾರೀ ಗೋಲ್ಮಾಲ್‌ ಆರೋಪ : ನಿಷ್ಪಕ್ಷಪಾತ ತನಿಖೆಗೆ ಆರ್‌.ಅಶೋಕ್‌ ಆಗ್ರಹ

ದೇವರಾಜ ಅರಸು ಅಭಿವೃದ್ಧಿ ನಿಗಮದಲ್ಲಿ ಭಾರೀ ಗೋಲ್ಮಾಲ್‌ ಆರೋಪ : ನಿಷ್ಪಕ್ಷಪಾತ ತನಿಖೆಗೆ ಆರ್‌.ಅಶೋಕ್‌ ಆಗ್ರಹ

ಬೆಂಗಳೂರು : ವಾಲ್ಮೀಕಿ ನಿಗಮದ ಬಳಿಕ ಇದೀಗ ದೇವರಾಜ ಅರಸು ನಿಗಮದಲ್ಲೂ ಕೇಳಿಬರುತ್ತಿರುವ ಅಕ್ರಮದ ಆರೋಪಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಮತ್ತೊಂದು ನಿದರ್ಶನವಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್‌ ಕಿಡಿಕಾರಿದ್ದಾರೆ.

ಟ್ವೀಟರ್‌ ನಲ್ಲಿ ಬರೆದುಕೊಂಡಿರುವ ಅವರು ಹಿಂದುಳಿದ ಸಮುದಾಯಗಳ ಕಲ್ಯಾಣಕ್ಕಾಗಿ ಬಡ ಮಹಿಳೆಯರಿಗೆ ತಲುಪಬೇಕಿದ್ದ ಹೊಲಿಗೆ ಯಂತ್ರ ಖರೀದಿಯ ಮೇಲೆಯೂ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿರುವುದು ಅತ್ಯಂತ ಖಂಡನೀಯ. ಜನರ ಕಲ್ಯಾಣಕ್ಕಾಗಿ ರೂಪಿಸಲಾದ ಯೋಜನೆಗಳಲ್ಲೇ ಗೋಲ್ ಮಾಲ್ ನಡೆದಿರುವ ಆರೋಪಗಳಿಗೆ ರಾಜ್ಯ ಸರ್ಕಾರ ಉತ್ತರಿಸಲೇಬೇಕು ಎಂದಿದ್ದಾರೆ.

ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular