ಗುಂಡ್ಲುಪೇಟೆ : ತಾಲೂಕಿನ ಕೂತನೂರು ಗ್ರಾಮದ ಸಮೀಪದ ಜಮೀನಿನಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.
ಗ್ರಾಮದ ನಿವಾಸಿ ಸಹುಲ್ ಅವರಿಗೆ ಸೇರಿದ ಜಮೀನಿನಲ್ಲಿ ಬುಧವಾರ ರಾತ್ರಿ ಚಿರತೆ ಓಡಾಡುತ್ತಿರುವುದು ಗಮನಕ್ಕೆ ಬಂದಿದೆ. ಜಮೀನು ಗ್ರಾಮದ ಸಮೀಪದಲ್ಲೇ ಇರುವುದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ.
ರಾತ್ರಿ ವೇಳೆ ಜಮೀನು ಹಾಗೂ ಗ್ರಾಮದ ಸುತ್ತಮುತ್ತ ಓಡಾಡುವಾಗ ಎಚ್ಚರಿಕೆ ವಹಿಸುವಂತೆ ಗ್ರಾಮಸ್ಥರು ಪರಸ್ಪರ ಮನವಿ ಮಾಡಿಕೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿ, ಗ್ರಾಮಸ್ಥರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.



