Sunday, April 20, 2025
Google search engine

Homeರಾಜ್ಯಔಷಧ ವಿತರಣೆ ವಿವರಗಳನ್ನು ಸಮರ್ಪಕವಾಗಿ ದಾಖಲಿಸಬೇಕು

ಔಷಧ ವಿತರಣೆ ವಿವರಗಳನ್ನು ಸಮರ್ಪಕವಾಗಿ ದಾಖಲಿಸಬೇಕು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಹೊರ ರೋಗಿಗಳು ಹಾಗೂ ಒಳರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಾಧೀಶ ಬಿ.ಎಸ್.ಪಾಟೀಲ್ ಸೂಚನೆ ನೀಡಿದರು.

ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ತುರ್ತು ಚಿಕಿತ್ಸಾ ಘಟಕದ ಔಷಧ ವಿತರಣೆಯ ಮಾಹಿತಿ ಮಾತ್ರ ನೀಡಲಾಗಿದೆ. ಇದರೊಂದಿಗೆ ರೋಗಿಗಳಿಗೆ ವಿತರಿಸುವ ಔಷಧಿಯ ಹೆಸರು, ಪ್ರಮಾಣ ಮತ್ತು ವಿವರಗಳನ್ನು ರಿಜಿಸ್ಟರ್‌ನಲ್ಲಿ ನೋಂದಾಯಿಸಬೇಕು. ಭಾನುವಾರದಂದು ವೈದ್ಯರು ಲಭ್ಯವಿರುವುದಿಲ್ಲ, ತುರ್ತು ಸಂದರ್ಭಗಳಲ್ಲಿ ಫೋನ್ ಕರೆಗಳು ಮತ್ತು ಸರಿಯಾಗಿ ಸ್ಪಂದಿಸುವುದಿಲ್ಲ. ಬಡವರು ಹೆಚ್ಚಾಗಿ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದಾರೆ. ಹಾಗಾಗಿ ವೈದ್ಯರು ಪಾಲಿ ಪದ್ಧತಿಯಲ್ಲಿ ಕರ್ತವ್ಯ ನಿರ್ವಹಿಸಲು ವ್ಯವಸ್ಥೆ ಮಾಡಬೇಕು ಎಂದು ಸಾರ್ವಜನಿಕರು ಲೋಕಾಯುಕ್ತರ ಗಮನ ಸೆಳೆದರು.

”ಬಡವರಿಗೆ ಸೂಕ್ತ ಆರೋಗ್ಯ ಸೇವೆ ಒದಗಿಸಬೇಕು. ತಕ್ಷಣ ಸ್ಪಂದಿಸುವ ಕೆಲಸವಾಗಬೇಕು. ಈ ಬಗ್ಗೆ ದೂರುಗಳು ಬಂದರೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ದೇವರಾಜ್ ಅವರಿಗೆ ಸೂಚನೆ ನೀಡಿದರು. ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಜಿಲ್ಲಾ ಆಸ್ಪತ್ರೆ ತುರ್ತು ಚಿಕಿತ್ಸಾ ವಿಭಾಗ, ನೂತನವಾಗಿ ನಿರ್ಮಿಸಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು. ಆರ್.ಜೆ.ಲೋಕಾಯುಕ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಾಸುದೇವರಾಮ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್, ಜಿಲ್ಲಾ ಸರ್ಜನ್ ಡಾ.ದೇವರಾಜ್ ಸೇರಿದಂತೆ ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ಇದ್ದರು.

RELATED ARTICLES
- Advertisment -
Google search engine

Most Popular