Friday, July 10, 2026
Google search engine

Homeರಾಜಕೀಯಸಂಪುಟ ವಿಸ್ತರಣೆ ಒತ್ತಡವಿಲ್ಲ; ಬೀದಿ ವ್ಯಾಪಾರಿಗಳಿಗೆ ನಿಯಮ ಪಾಲನೆ ಕಡ್ಡಾಯ: ಸಿಎಂ ಡಿ.ಕೆ. ಶಿವಕುಮಾರ್

ಸಂಪುಟ ವಿಸ್ತರಣೆ ಒತ್ತಡವಿಲ್ಲ; ಬೀದಿ ವ್ಯಾಪಾರಿಗಳಿಗೆ ನಿಯಮ ಪಾಲನೆ ಕಡ್ಡಾಯ: ಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಯಾವುದೇ ಒತ್ತಡ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ನಾಯಕರು ಇಂದು ಅಥವಾ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಅವರು ಕರೆಯುವಾಗ ಚರ್ಚೆಗೆ ಹಾಜರಾಗುವುದಾಗಿ ತಿಳಿಸಿದರು.

ರಾಜ್ಯದ ಕೆಲ ಭಾಗಗಳಲ್ಲಿ ಮಳೆಯ ಕೊರತೆ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ಬೇಡಿಕೆ ಬಂದಿರುವುದಾಗಿ ಹೇಳಿದ ಸಿಎಂ, ಕಾನೂನು ಹಾಗೂ ಹಣಕಾಸು ಇಲಾಖೆಯೊಂದಿಗೆ ಸಮಾಲೋಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು. ಸುವರ್ಣ ವಿಧಾನಸೌಧದಲ್ಲಿ ಎಲ್ಲ ದೇವಸ್ಥಾನಗಳ ಹುಂಡಿಗಳ ಭದ್ರತೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿಯೂ ತಿಳಿಸಿದರು.

ಬೆಳಗಾವಿಯಲ್ಲಿ ಆರ್‌ಎಸ್‌ಎಸ್ ಸಭೆ ನಡೆಯುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ವರದಿ ಕೇಳಿಸಿಕೊಂಡಿದ್ದು, ಕಾನೂನಿನ ಪ್ರಕಾರ ಅವಕಾಶವಿದ್ದರೆ ಅನುಮತಿ ಸಿಗುತ್ತದೆ, ಇಲ್ಲದಿದ್ದರೆ ಸಿಗುವುದಿಲ್ಲ ಎಂದು ಹೇಳಿದರು.

ಬೆಂಗಳೂರುದಲ್ಲಿ ನಡೆಯುತ್ತಿರುವ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಮಾತನಾಡಿದ ಸಿಎಂ, ಬೀದಿ ವ್ಯಾಪಾರಿಗಳ ತೆರವು ನಿರ್ಧಾರವು ಎಲ್ಲಾ ಪಕ್ಷಗಳ ಶಾಸಕರ ಒಮ್ಮತದ ತೀರ್ಮಾನವಾಗಿತ್ತು ಎಂದರು. ನಗರದಲ್ಲಿ ಸುಮಾರು 60 ಸಾವಿರ ಬೀದಿ ವ್ಯಾಪಾರಿಗಳಿದ್ದರೂ, 30 ಸಾವಿರ ಮಂದಿ ಮಾತ್ರ ನೋಂದಣಿ ಮಾಡಿಕೊಂಡಿದ್ದಾರೆ. ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ವ್ಯಾಪಾರ ನಡೆಸಲು ಅವಕಾಶವಿದ್ದು, ಪ್ರಮುಖ ರಸ್ತೆಗಳಲ್ಲಿ ಅಂಗಡಿಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ, ಆಗಸ್ಟ್‌ ಗಡುವು ನಿಗದಿಯಾಗಿದೆ. ಕಾಲಾವಕಾಶ ವಿಸ್ತರಣೆ ಕೋರಿ ಅಧಿಕಾರಿಗಳು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇದು ಆಡಳಿತಾತ್ಮಕ ವಿಷಯವಾಗಿದೆ. ಸರ್ಕಾರ ಚುನಾವಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಸ್ಪಷ್ಟಪಡಿಸಿದರು.

RELATED ARTICLES
- Advertisment -
Google search engine

Most Popular