Saturday, July 11, 2026
Google search engine

Homeಅಪರಾಧಎಸ್‌ಐಆರ್‌ ಕರ್ತವ್ಯ ಮುಗಿಸಿ ಮನೆಗೆ ಬಂದ ಬಿಎಲ್ಒಗೆ ಹೃದಯಾಘಾತ; ಸಾವು

ಎಸ್‌ಐಆರ್‌ ಕರ್ತವ್ಯ ಮುಗಿಸಿ ಮನೆಗೆ ಬಂದ ಬಿಎಲ್ಒಗೆ ಹೃದಯಾಘಾತ; ಸಾವು

ದಾವಣಗೆರೆ: ಎಸ್‌ಐಆರ್‌ ಕರ್ತವ್ಯ ಮುಗಿಸಿ ಮನೆಗೆ ಮರಳಿದ್ದ ಬಿಎಲ್ಒ ಡಿ.ಆರ್. ರಾಜಪ್ಪ (57) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದ ನಿವಾಸಿಯಾಗಿದ್ದ ಅವರು ಗ್ರಾಮ ಪಂಚಾಯತ್‌ನಲ್ಲಿ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಜುಲೈ 10ರಂದು ಮನೆಮನೆಗೆ ಭೇಟಿ ನೀಡಿ ಕರ್ತವ್ಯ ನಿರ್ವಹಿಸಿದ್ದ ಅವರು, ರಾತ್ರಿ ಎದೆನೋವು ಕಾಣಿಸಿಕೊಂಡು ಮೃತಪಟ್ಟಿದ್ದಾರೆ. ಘಟನೆ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

RELATED ARTICLES
- Advertisment -
Google search engine

Most Popular