Saturday, July 11, 2026
Google search engine

Homeರಾಜ್ಯಕರ್ನಾಟಕ ಪೊಲೀಸರಿಗೆ ತಾಂತ್ರಿಕ ಬಲ : 32 ಮೊಬೈಲ್ ಫೋರೆನ್ಸಿಕ್ ವ್ಯಾನ್‌, 75 ಬೊಲೆರೋ ವಾಹನಗಳ...

ಕರ್ನಾಟಕ ಪೊಲೀಸರಿಗೆ ತಾಂತ್ರಿಕ ಬಲ : 32 ಮೊಬೈಲ್ ಫೋರೆನ್ಸಿಕ್ ವ್ಯಾನ್‌, 75 ಬೊಲೆರೋ ವಾಹನಗಳ ಲೋಕಾರ್ಪಣೆ

ಬೆಂಗಳೂರು : ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಆಂತರಿಕ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಸರ್ಕಾರ 32 ಅತ್ಯಾಧುನಿಕ ಮೊಬೈಲ್ ಫೋರೆನ್ಸಿಕ್ ವ್ಯಾನ್‌ಗಳು ಹಾಗೂ 75 ಹೊಸ ಬೊಲೆರೋ ವಾಹನಗಳನ್ನು ನೀಡಿದೆ.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ವಾಹನಗಳನ್ನು ಲೋಕಾರ್ಪಣೆ ಮಾಡಿದರು. ಅಪರಾಧ ಪ್ರಕರಣಗಳ ತನಿಖೆ ಮತ್ತು ಸಾಕ್ಷ್ಯ ಸಂಗ್ರಹ ಪ್ರಕ್ರಿಯೆಯನ್ನು ಇನ್ನಷ್ಟು ವೇಗವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸಲು ಈ ಮೊಬೈಲ್ ಫೋರೆನ್ಸಿಕ್ ವ್ಯಾನ್‌ಗಳು ನೆರವಾಗಲಿವೆ.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ, ದೇಶದ ಗಡಿಯನ್ನು ಯೋಧರು ಕಾಪಾಡಿದರೆ, ರಾಜ್ಯದ ಆಂತರಿಕ ಶಾಂತಿ ಮತ್ತು ಭದ್ರತೆಯನ್ನು ಪೊಲೀಸರು ಕಾಪಾಡುತ್ತಿದ್ದಾರೆ ಎಂದು ಪ್ರಶಂಸಿಸಿದರು. ವಿಶೇಷವಾಗಿ ಮಾದಕ ವಸ್ತು ಜಾಲದ ವಿರುದ್ಧದ ಕಾರ್ಯಾಚರಣೆಯಲ್ಲಿ ಕರ್ನಾಟಕ ಪೊಲೀಸರು ಉತ್ತಮ ಸಾಧನೆ ಮಾಡಿದ್ದು, ಸಾವಿರಾರು ಡ್ರಗ್ ಪೆಡ್ಲರ್‌ಗಳ ವಿರುದ್ಧ ಕ್ರಮ ಕೈಗೊಂಡಿರುವುದನ್ನು ಶ್ಲಾಘಿಸಿದರು.

ಹಗಲಿರುಳು ಸೇವೆ ಸಲ್ಲಿಸುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಸಾರ್ವಜನಿಕರಲ್ಲಿ ಇಲಾಖೆಯ ಮೇಲಿನ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಮುಖ್ಯಮಂತ್ರಿ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ರಿಜ್ವಾನ್ ಅರ್ಷದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular