ಬಳ್ಳಾರಿ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ, ಅಂಬಿಕಾ ಎಪ್.ಪಿ.ಓ. ರೈತನ ಕಂಪನಿ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆಯನ್ನ ಆಧರಿಸಿ ಹಾಗೂ ಇದೇ ಕ್ಷೇತ್ರದಲ್ಲಿ, ಕಾರ್ಯನಿರ್ವಹಣಾ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಗಿರೀಶ್ ಅವರಿಗೆ ದೇಶದ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ಜೊತೆಯಲ್ಲಿ, 77ನೇ ಸ್ವತಂತ್ರೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅವಕಾಶ ದೊರೆತಿದೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ದೇಶದ 128 ಸಾಧಕರನ್ನ ಗುರುತಿಸಿ ಪ್ರಧಾನ ಮಂತ್ರಿ ಸಚಿವಾಲಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಿದೆ.
ಇನ್ನು ಈ ಬಗ್ಗೆ, ಕೂಡ್ಲಿಗಿಯ ಅಂಬಿಕಾ ಮತ್ತು ಗಿರೀಶ್ ಸಂತಸ ವ್ಯಕ್ತಪಡಿಸಿದ್ದು, ನಮ್ಮನ್ನು ಗುರುತಿಸಿ, 77 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವ ಸಂದರ್ಭವನ್ನ ಒದಗಿಸಿರುವುದು ನಮ್ಮ ಸೌಭಾಗ್ಯ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರಕ್ಕೆ ನಮ್ಮ ಕೃತಜ್ಞತೆಗಳು ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.