Wednesday, July 15, 2026
Google search engine

Homeರಾಜ್ಯಮೈಸೂರಿನಲ್ಲಿ ತಲೆಬುರುಡೆ ಇಟ್ಟು ವಾಮಾಚಾರ ಶಂಕೆ : ಗೂಳೂರು ಗ್ರಾಮದಲ್ಲಿ ಆತಂಕ

ಮೈಸೂರಿನಲ್ಲಿ ತಲೆಬುರುಡೆ ಇಟ್ಟು ವಾಮಾಚಾರ ಶಂಕೆ : ಗೂಳೂರು ಗ್ರಾಮದಲ್ಲಿ ಆತಂಕ

ಮೈಸೂರು : ನಂಜನಗೂಡು ತಾಲ್ಲೂಕಿನ ಗೂಳೂರು ಗ್ರಾಮದ ರಸ್ತೆಯಲ್ಲಿ ಮಾನವನ ತಲೆಬುರುಡೆ ಮತ್ತು ಮೂಳೆಗಳು ಪತ್ತೆಯಾಗಿದ್ದು, ವಾಮಾಚಾರ ನಡೆಸಿರುವ ಶಂಕೆಯಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಗ್ರಾಮದ ಸ್ಮಶಾನದಿಂದ ಮಾನವನ ತಲೆಬುರುಡೆ ಹಾಗೂ ಮೂಳೆಗಳನ್ನು ತಂದು ರಸ್ತೆಯಲ್ಲಿ ಇಟ್ಟು ಕಿಡಿಗೇಡಿಗಳು ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಲ್ಲದೆ ಸ್ಥಳದಲ್ಲಿ ನಿಂಬೆಹಣ್ಣು, ಅರಿಶಿನ-ಕುಂಕುಮ ಸೇರಿದಂತೆ ಪೂಜಾ ಸಾಮಗ್ರಿಗಳ ಕುರುಹುಗಳು ಸಹ ಪತ್ತೆಯಾಗಿದ್ದು, ಅಮಾವಾಸ್ಯೆ ಹಿನ್ನೆಲೆಯಲ್ಲಿ ಈ ರೀತಿಯ ಕೃತ್ಯ ನಡೆದಿರಬಹುದು ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ಗ್ರಾಮದ ನಿವಾಸಿಗಳು ಈ ಕೃತ್ಯದಲ್ಲಿ ಭಾಗಿಯಾಗಿಲ್ಲ, ಹೊರಗಿನಿಂದ ಬಂದವರು ಇದನ್ನು ಮಾಡಿರುವ ಸಾಧ್ಯತೆ ಇದೆ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದವರ ಪತ್ತೆಗೆ ತನಿಖೆ ಆರಂಭಿಸಲಾಗಿದೆ. ಘಟನೆಯಿಂದ ಗೂಳೂರು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.


RELATED ARTICLES
- Advertisment -
Google search engine

Most Popular