Saturday, April 19, 2025
Google search engine

HomeUncategorizedಜೂ ೧೯ ರಿಂದ ಕುಷ್ಠ ರೋಗ ಪತ್ತೆ ಆಂದೋಲನ: ಡಾ: ಹೆಚ್.ಎನ್ ಗೋಪಾಲಕೃಷ್ಣ

ಜೂ ೧೯ ರಿಂದ ಕುಷ್ಠ ರೋಗ ಪತ್ತೆ ಆಂದೋಲನ: ಡಾ: ಹೆಚ್.ಎನ್ ಗೋಪಾಲಕೃಷ್ಣ


ಮಂಡ್ಯ: ಆರೋಗ್ಯ ಇಲಾಖೆ ವತಿಯಿಂದ ಜೂನ್ ೧೯ ರಿಂದ ಜುಲೈ ೬ ರವರೆಗೆ ಕುಷ್ಠ ರೋಗ ಪತ್ತೆ ಹಚ್ಚುವ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಷ್ಠ ರೋಗ ಸಮಾಜದ ಪಿಡುಗಾಗಿದ್ದು, ಇದನ್ನು ಪತ್ತೆ ಹಚ್ಚಿ ಅಗತ್ಯ ಚಿಕಿತ್ಸೆ ನೀಡಲು ಜಿಲ್ಲೆಯಲ್ಲಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಆರೋಗ್ಯ ಕಾರ್ಯಕರ್ತೆಯರು ಜಿಲ್ಲೆಯ ಪ್ರತಿ ಮನೆಗೆ ಭೇಟಿ ನೀಡಿ ರೋಗದ ಲಕ್ಷಣಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸಾರ್ವಜನಿಕರು ಆರೋಗ್ಯ ಕಾರ್ಯಕರ್ತೆಯರಿಗೆ ನಿಖರ ಮಾಹಿತಿ ನೀಡಿ. ರೋಗದ ಲಕ್ಷಣಗಳು ಕಂಡು ಬಂದರೆ ವೈದ್ಯರು ಪರೀಕ್ಷಿಸಿ ಉತ್ತಮ ಚಿಕಿತ್ಸೆ ನೀಡಲಿದ್ದಾರೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಅವರು ತಮ್ಮ ವಿದ್ಯಾರ್ಥಿಗಳಿಗೆ ರೋಗದ ಲಕ್ಷಣಗಳ ಬಗ್ಗೆ ಅರಿವು ಮೂಡಿಸಿ. ಅಂಗನವಾಡಿ ಕಾರ್ಯಕರ್ತೆಯರು ತಾವು ಕಾರ್ಯನಿರ್ವಹಿಸುವ ಸ್ಥಳದ ವ್ಯಾಪ್ತಿಯಲ್ಲಿ ಆಂದೋಲನದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ: ಧನಂಜಯ್ ಅವರು ಮಾತನಾಡಿ ಕುಷ್ಠ ರೋಗ ಪತ್ತೆ ಹಚ್ಚುವ ಆಂದೋಲನಕ್ಕೆ ಇಲಾಖೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆರೋಗ್ಯ ಇಲಾಖೆ ಅವರು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮ ದೇಹದ ಮೇಲೆ ಯಾವುದೇ ರೀತಿಯ ಮಚ್ಚೆಗಳಿದ್ದಲ್ಲಿ ಮಾಹಿತಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಿ. ೨೦೩೦ ರವೇಳೆಗೆ ಕುಷ್ಠ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಗುರಿ ಹೊಂದಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸೀಫ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು ಆರ್.ಸಿ. ಹೆಚ್ ಅಧಿಕಾರಿ ಡಾ: ಅನಿಲ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular