ಕೆ.ಆರ್.ನಗರ: ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಇಂದು ಕೆ. ಆರ್. ನಗರದ ತಾಲೂಕು ಕಚೇರಿ ಮುಂಭಾಗ ಸಾರ್ವಜನಿಕರಿಂದ ಪ್ರತಿಭಟನೆ ನಡೆಸಿ ತಹಸಿಲ್ದಾರ್ ಅವರಿಗೆ ಸೌಜನ್ಯ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಮನವಿ ನೀಡಿದರು. ಇದೇ ಸಂದರ್ಭ ಮಾತನಾಡಿದ ಮುಖಂಡರು ಸೌಜನ್ಯ ಕೊಲೆ ಸಂಬಂಧ ನಿಜವಾದ ಅಪರಾಧಿಗಳನ್ನು ಬಂಧಿಸಿ ಅವರನ್ನು ಗಲ್ಲಿಗೇರಿಸಬೇಕು ಮತ್ತು ನಿಜವಾದ ಆರೋಪಿಗಳನ್ನು ಕಂಡುಹಿಡಿಯುವಲ್ಲಿ ವಿಫಲರಾದ ಅಧಿಕಾರಿಗಳನ್ನು ಅಮಾನತು ಮಾಡಿ ಅವರಿಗೂ ಸಹ ಶಿಕ್ಷೆ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಶ್ರೀನಿವಾಸ್ ಅಂಪಾಪುರ, ಸೂರಿ, ರಾಜು, ಮೋಹನ್ ಕುಮಾರಿ, ಭಾಗ್ಯಮ್ಮ ಮುಂತಾದವರು ಭಾಗವಹಿಸಿ ಸೌಜನ್ಯ ಹತ್ಯೆ ಮಾಡಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಅವರನ್ನು ಗಲ್ಲಿಗೇರಿಸಬೇಕು ಎಂದು ಘೋಷಣೆ ಕೂಗಿದರು.
