Saturday, April 19, 2025
Google search engine

Homeರಾಜ್ಯಸುದ್ದಿಜಾಲದ. ಕನ್ನಡ:ಬಿಜೆಪಿ ಶಾಸಕರ ಹಕ್ಕುಚ್ಯುತಿ ಆರೋಪಿಸಿ ಪ್ರತಿಭಟನೆ

ದ. ಕನ್ನಡ:ಬಿಜೆಪಿ ಶಾಸಕರ ಹಕ್ಕುಚ್ಯುತಿ ಆರೋಪಿಸಿ ಪ್ರತಿಭಟನೆ

ಮಂಗಳೂರು (ದಕ್ಷಿಣ ಕನ್ನಡ):ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಶಾಸಕರ ಹಕ್ಕನ್ನು ಚ್ಯುತಿಗೊಳಿಸಲಾಗಿದೆ ಎಂದು ಆರೋಪಿಸಿ ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳು ಮಂಗಳೂರು ನಗರದಲ್ಲಿರೋ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಮೆಟ್ಟಿಲಲ್ಲೇ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.
ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಶಾಸಕರು, ಮೇಯರ್ ಸುಮಾರು ಒಂದೂವರೆ ತಾಸಿನವರೆಗೆ ಪ್ರತಿಭಟನೆ ನಡೆಸಿದರು.
ಬಳಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಇರುವೈಲು ಗ್ರಾ.ಪಂ. ಕಟ್ಟಡ ಉದ್ಘಾಟನೆ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡಿರುವ ಪಿಡಿಒ ಹಾಗೂ ಇಒರನ್ನು ಸರಕಾರ ಮರು ನೇಮಕಕ್ಕೆ ಈಗಾಗಲೇ ಕ್ರಮ ವಹಿಸಿದೆ. ಆದೇಶ ಪತ್ರ ಸಂಜೆಯೊಳಗೆ ಕೈ ಸೇರುವ ಸಾಧ್ಯತೆ ಇದೆ ಹಾಗೂ ಗ್ರಾ.ಪಂ. ಕಚೇರಿ ಕಾರ್ಯಾರಂಭಕ್ಕೆ ಕ್ರಮ ವಹಿಸುವುದಾಗಿ ಶಾಸಕರ ಬೇಡಿಕೆಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಂಸದ ನಳಿನ್ ಕುಮಾರ್ ಕಟೀಲು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರಕಾರ ಆಡಳಿತಕ್ಕೆ ಬಂದಾಗಿನಿಂದ ದ್ವೇಷ ರಾಜಕಾರಣ ಆರಂಭ ಆಗಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಶಾಸಕರಾದ ರಾಜೇಶ್ ನಾಯ್ಕ, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರು ಮಾತನಾಡಿದರು. ಶಾಸಕರಾದ ಭಾಗೀರಥಿ, ಮೇಯರ್ ಜಯಾನಂದ ಅಂಚನ್, ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ, ವೀಣಾ, ಸಂದೀಪ್ ಗರೋಡಿ, ಮೊದಲಾದವರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular