ಚಳ್ಳಕೆರೆ: ಇಂದು ನಾಡಿನಾಧ್ಯಂತ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ತ್ರಿವರ್ಣ ರಾಷ್ಟ್ರಧ್ವಜ ಹಾರಿಸುವ ಮೂಲಕ ಸಂಭ್ರಮದಲ್ಲಿದ್ದರೆ, ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ ಗ್ರಾಮದ ಕೆನರಾ ಬ್ಯಾಂಕ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಆ.15 ರಜಾದಿನ ಎಂದು ತಿಳಿದು ಬ್ಯಾಂಕ್ ಆವರಣದಲ್ಲಿ ರಾಷ್ಟ್ರ ಧ್ವಜ ಹಾರಿಸದೆ ಅಗೌರವ ತೋರಿರುವುದಕ್ಕೆ, ಈ ರೀತಿ ನಿರ್ಲಕ್ಷ ತೋರಿಸಿರುವುದು ನಮ್ಮ ರಾಷ್ಟ್ರ ಧ್ವಜಕ್ಕೆ ಮಾಡಿದ ಅಪಮಾನ ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಅಧಿಕಾರಿಗಳಿಗೆ ತಿಳಿ ಹೇಳಬೇಕಿದೆ ಎಂದು ಗ್ರಾಮಸ್ಥರು ಬ್ಯಾಂಕ್ ಅಧಿಕಾರಿಗಳ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.