Sunday, April 20, 2025
Google search engine

Homeಅಪರಾಧಮಂಗಳೂರು: ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಮಂಗಳೂರು: ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರದ ಅಳಪೆ ಗ್ರಾಮದ ಕಂಕನಾಡಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವ್ಯಕ್ತಿಯೋರ್ವ ಅಕ್ರಮವಾಗಿ ಮಾದಕ ವಸ್ತುವಾದ MDMA ನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ  (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಇಬ್ರಾಹಿಂ ಅರ್ಷಾದ್ ವಿ.ಕೆ(30), (ವಾಸ: ಆಯಿಷಾ ಮಂಝೀಲ್, ಧೂಮರಕಾಡು, ಮಿಂಜಾ ಪಂಚಾಯತ್, ಮಿಯಾಪದವು, ಮಂಜೇಶ್ವರ, ಕಾಸರಗೋಡು, ಕೇರಳ ರಾಜ್ಯ) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಒಟ್ಟು 100 ಗ್ರಾಂ ತೂಕದ ರೂ. 5,00,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 1000/-, ಮೊಬೈಲ್ ಫೋನುಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 5,11,500/-ಆಗಬಹುದು. ಆರೋಪಿಯ ವಿರುದ್ಧ ಕಂಕನಾಡಿ ನಗರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 

ಈ ಮಾದಕ ವಸ್ತು ಮಾರಾಟ ಜಾಲದ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.  ಆರೋಪಿ ಇಬ್ರಾಹೀಂ ಹರ್ಷಾದ್ ಎಂಬಾತನ ವಿರುದ್ಧ ಈ ಹಿಂದೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 175 ಕೆಜಿ ಗಾಂಜಾ ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ಹಾಗೂ ಕುಂಬಳೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ನರೇಂದ್ರ, ಶರಣಪ್ಪ ಭಂಡಾರಿ, ಸುದೀಪ್ ಎಂ ವಿ, ಎ ಎಸ್ ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು  ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular