Saturday, April 19, 2025
Google search engine

Homeರಾಜ್ಯಸುದ್ದಿಜಾಲಆಶಾ ಕಾರ್ಯಕರ್ತೆಯರಿಗೆ ಕೀಟಜನ್ಯ ರೋಗಗಳ ನಿಯಂತ್ರಣ ಕುರಿತು ತರಬೇತಿ ಕಾರ್ಯಾಗಾರ

ಆಶಾ ಕಾರ್ಯಕರ್ತೆಯರಿಗೆ ಕೀಟಜನ್ಯ ರೋಗಗಳ ನಿಯಂತ್ರಣ ಕುರಿತು ತರಬೇತಿ ಕಾರ್ಯಾಗಾರ

                      

ರಾಮನಗರ:ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗಿ, ಚಿಕುನ್‌ಗುನ್ಯ, ಮೆದುಳು ಜ್ವರ, ಆನೆಕಾಲು ರೋಗಗಳನ್ನು ನಿಯಂತ್ರಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ತರವಾಗಿದ್ದು ಸಂಪನ್ಮೂಲ ವ್ಯಕ್ತಿಗಳು ತಿಳಿಸಿದ ಮಾಹಿತಿಯನ್ನು ಕ್ಷೇತ್ರ ಮಟ್ಟದಲ್ಲಿ ಅನುಷ್ಠಾನಗೊಳಿಸಿ ಸೊಳ್ಳೆಗಳಿಂದ ಹರಡುವ ರೋಗಗಳನ್ನು ನಿಯಂತ್ರಿಸಲು ಸಹಕರಿಸಬೇಕೆಂದುಜಿಲ್ಲಾ ಸವೇಕ್ಷಣಾಧಿಕಾರಿಡಾ. ಕಿರಣ್ ಶಂಕರ್ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯರಿಗೆ ರೋಗವಾಹಕ ಆಶ್ರಿತ ರೋಗಗಳು ಹಾಗೂ ನಿಯಂತ್ರಣ ಕುರಿತು ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಶಶಿಧರ್ ಅವರು ಪ್ರಾಸ್ಥಾವಿಕವಾಗಿ ಮಾತನಾಡಿ, ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂಗಿ, ಚಿಕುನ್‌ಗುನ್ಯ, ಮೆದುಳು ಜ್ವರ, ಆನೆಕಾಲು ರೋಗಗಳು ಹಾಗೂ ನಿಯಂತ್ರಣ ಕುರಿತು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು ಕಾರ್ಯಾಗಾರದಲ್ಲಿ ತಾವುಗಳು ಮಾಹಿತಿಯನ್ನು ತಿಳಿದುಕೊಂಡು ಕ್ಷೇತ್ರ ಭೇಟಿವೇಳೆಯಲ್ಲಿ ಶಂಕಿತ ಪ್ರಕರಣಗಳ ಪತ್ತೆ ಹಾಗೂ ಈಡಿಸ್ ಲಾರ್ವ ಸಮೀಕ್ಷೆವೇಳೆಯಲ್ಲಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಿ ಸಮುದಾಯದಲ್ಲಿ ರೋಗವಾಹಕ ಆಶ್ರಿತ ರೋಗಗಳು ಮತ್ತು ನಿಯಂತ್ರಣ ಕುರಿತು ಅರಿವು ಮೂಡಿಸಿದಾಗ ಮಾತ್ರ ಸಮುದಾಯದಲ್ಲಾಗುವ ಸಾವು-ನೋವುಗಳನ್ನು ತಪ್ಪಿಸಲು ಸಾಧ್ಯ ಆದ್ದರಿಂದ ತಾವುಗಳು ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಸದಾ ಜಾಗೃತರಾಗಿ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.


ಕೀಟಶಾಸ್ತçಜ್ಞರಾದ ಸೌಮ್ಯ ಅವರು ಮಾತನಾಡಿ, ಸೊಳ್ಳೆಗಳಿಂದ ಪ್ರಮುಖವಾಗಿ ಮಲೇರಿಯ, ಡೆಂಗಿ, ಚಿಕುನ್ ಗುನ್ಯ, ಮೆದುಳುಜ್ವರ ರೋಗಗಳು ಹರಡುತ್ತವೆ. ಸೋಂಕಿತ ಸೊಳ್ಳೆಗಳು ಆರೋಗ್ಯವಂತ ವ್ಯಕ್ತಿಯನ್ನು ಕಚ್ಚಿದಾಗ ರೋಗವು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಮಲೇರಿಯ ಸೋಂಕು ತಗುಲಿದಾಗ ಚಳಿ, ಜ್ವರ, ತಲೆನೋವು, ನಡುಕ, ವಾಂತಿ, ವಾಕರಿಕೆ, ಮೈ-ಕೈನೋವು, ಡೆಂಗಿಜ್ವರದಲ್ಲಿ ಮೈಮೇಲೆ ಕೆಂಪು ಗಂದೆಗಳು, ಕಣ್ಣಿನ ಹಿಂಬಾಗ ನೋವು, ಸೋಂಕು ತೀರ್ವತರವಾದಾಗ ವಸಡು, ಮೂಗು, ಕಿವಿಗಳಲ್ಲಿ ರಕ್ತಸ್ರಾವ ಡಾಂಬರು ಬಣ್ಣದ ಮಲವಿಸರ್ಜನೆ, ಚಿಕುನ್‌ಗುನ್ಯದಲ್ಲಿ ಜ್ವರ, ಸಣ್ಣ-ಸಣ್ಣ ಕೀಲುಗಳ ನೋವು, ಮೆದುಳು ಜ್ವರದಲ್ಲಿ ತೀವ್ರತರ ಜ್ವರ, ಜ್ಞಾನ ತಪ್ಪುವುದು, ಆನೇಕಾಲು ರೋಗದಲ್ಲಿ ಕಾಲುಗಳು ಮತ್ತು ವೃಷಣಭಾಗದ ಊತ ಇಂತಹ ಲಕ್ಷಣಗಳು ಕಂಡ ತಕ್ಷಣ ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಬೇಕು.

ಒಂದುವೇಳೆ ಪ್ರಕರಣಗಳು ದೃಢಪಟ್ಟಲ್ಲಿ ಸೂಕ್ತ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುವುದು. ಈ ಮಾಹಿತಿಯನ್ನು ಕ್ಷೇತ್ರ ಭೇಟಿವೇಳೆಯಲ್ಲಿ ಸಮುದಾಯದಲ್ಲಿ ಮಾಹಿತಿ ನೀಡಿ ರೋಗಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್.ಗಂಗಾಧರ್, ಆರೋಗ್ಯ ಮೇಲ್ವಿಚಾರಕ ರೇಣುಕಯ್ಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿನಯ್ ಕುಮಾರ್, ವಿಠಲ್ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.

RELATED ARTICLES
- Advertisment -
Google search engine

Most Popular