ಬಾಗಲಕೋಟೆ: ಕಳೆದ ಆಗಸ್ಟ್ 15 ರಂದು ರಾತ್ರೋರಾತ್ರಿ ಪ್ರತಿಷ್ಠಾಪನೆಗೊಂಡಿದ್ದ ಶಿವಾಜಿ ಮಹಾರಾಜರ ಮೂರ್ತಿ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
ಮೂರ್ತಿ ತೆರವುಗೊಳಿಸದಂತೆ ವಿವಿಧ ಹಿಂದೂಪರ ಸಂಘಟನೆಗಳು,ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನಾ ಸಮೀತಿ ಸದಸ್ಯರು ಹಾಗೂ ಬಿಜೆಪಿಯ ನಾಯಕರು ಪಟ್ಟು ಹಿಡಿದಿದ್ದರು.
ಈ ವೇಳೆ ಮಾಜಿ ಎಂ.ಎಲ್.ಸಿ ನಾರಾಯಣಸಾ ಭಾಂಡಗೆ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಾಗಲಕೋಟೆನಗರದ ಸೋನಾರ್ ನಗರದ ಬಳಿ ಅನಧಿಕೃತವಾಗಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಟಾಪಿಸಲಾಗಿತ್ತು.
ಸದ್ಯ ಬಾಗಲಕೋಟೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.