ಬಳ್ಳಾರಿ: ಕಾರ್ಮಿಕ ಇಲಾಖೆಯಿಂದ, ರಾಘವೇಂದ್ರ ಚಿತ್ರಮಂದಿರ ಬಳಿ, ಕೆ.ಸಿ ರಸ್ತೆ ಮಂತಾದ ಸ್ಥಳಗಳಲ್ಲಿ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿ ಇತ್ಯಾದಿ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ನಡೆಸಿ 3 ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕ ಮೌನೇಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ನಿರ್ದೇಶನದಂತೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ ಮತ್ತು ಬಿಡಿಡಿಎಸ್ ಚೈಲ್ಡ್ ಲೈಲ್ ಸಹಯೋಗದೊಂದಿಗೆ ನಗರದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇದ ಮತ್ತು ನಿಯಂತ್ರಣ) ಕಾಯ್ದೆ 1986 ರಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್‍ಪೋರ್ಸ್ ಸಮಿತಿ ಸಭೆ ನಡೆಸಿ ನಂತರ ಅಧಿಕಾರಿಗಳೊಂದಿಗೆ ಆಕಸ್ಮಿಕ ದಾಳಿ ಮಾಡಿ 03 ಕಿಶೋರ ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ, ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರಲು ಕ್ರಮ ಕೈಗೊಳ್ಳಲಾಗಿದೆ.