ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷ ಸಚ್ಚಿದಾನಂದ (ಸತೀಶ್) ಪೂಜಾರಿ ಅವರು ಪಕ್ಷ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಾಜಿ ಸಚಿವ ಬಿ. ರಮಾನಾಥ ರೈ ಅವರು ಸತೀಶ್ ಪೂಜಾರಿ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭ ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರೋಶನ್ ರೈ, ಪಿ.ಕೆ.ರಶೀದ್ ಪರ್ಲೊಟ್ಟು, ಡೆನ್ಝಿಲ್ ನೊರೋನ್ಹಾ ಮೊದಲಾದವರು ಉಪಸ್ಥಿತರಿದ್ದರು.