Sunday, April 20, 2025
Google search engine

Homeಸ್ಥಳೀಯ೧೦-೧೫ ಶಾಸಕರು ಕಾಂಗ್ರೆಸ್ ಸೇರಲು ಸಿದ್ದರಿದ್ದಾರೆ, ಮಾತುಕತೆ ನಡೆಯುತ್ತಿದೆ: ಸಚಿವ ಎನ್‌ ಚೆಲುವರಾಯಸ್ವಾಮಿ ಅವರಿಂದ ಸ್ಫೋಟಕ...

೧೦-೧೫ ಶಾಸಕರು ಕಾಂಗ್ರೆಸ್ ಸೇರಲು ಸಿದ್ದರಿದ್ದಾರೆ, ಮಾತುಕತೆ ನಡೆಯುತ್ತಿದೆ: ಸಚಿವ ಎನ್‌ ಚೆಲುವರಾಯಸ್ವಾಮಿ ಅವರಿಂದ ಸ್ಫೋಟಕ ಮಾಹಿತಿ‌‌


ಮೈಸೂರು: 10 ರಿಂದ 15 ಮಂದಿ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಸಚಿವ ಎನ್ ಚೆಲುವರಾಯಸ್ವಾಮಿ ಮೈಸೂರಿನಲ್ಲಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರ ಜೊತೆಯೂ ಮಾತುಕತೆ ನಡೆಯುತ್ತಿದೆ.
ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ.
ಯಾರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೋ ಅವರ ಹೆಸರನ್ನು ಈಗಲೇ ಹೇಳಲು ಸಾಧ್ಯವಿಲ್ಲ.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಹಾಲಿ-ಮಾಜಿ ಶಾಸಕರು ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದು ತಿಳಿಸಿದರು.


ಗುತ್ತಿಗೆದಾರರಿಂದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆಂಬ ಆರೋಪ ಕುರಿತು ಪ್ರಶ್ನೆ ಕೇಳುತ್ತಿದ್ದಂತೆ, ಅಯ್ಯೋ ಬಿಡಪ್ಪಾ, ಕೆಲಸ ಇಲ್ಲದವರು ಇದನ್ನೆಲ್ಲಾ ಮಾತನಾಡೋದು.‌ಹಿಂದಿನ ಸರ್ಕಾರದ ಅವಧಿಯಲ್ಲಿ ಒಂದು ವರ್ಷ ಪೇಮೆಂಟ್ ಕೊಟ್ಟಿರಲಿಲ್ಲ.
ನಾವು ಬಂದು ಕೇವಲ ಎರಡೂವರೆ ತಿಂಗಳಾಗಿದೆ.
ಅನುದಾನವನ್ನು ಒಂದೇ ಸಲ ಎಷ್ಟು ಅಂತಾ ಕೋಡೋಕೆ ಆಗುತ್ತದೆ. ಕೆಲವರು ಬಾಯಿ ಚಪಲಕ್ಕೆ ಏನೇನೋ ಮಾತನಾಡ್ತಾರೆ, ಅವ್ರಿಗೆಲ್ಲಾ ಉತ್ತರ ಕೋಡೋಕೆ ಆಗುತ್ತಾ ಎಂದು ಹೇಳಿದರು.

ರಾಜ್ಯದಲ್ಲಿ ಬರ ಘೋಷಣೆ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿ, ಈ ಬಗ್ಗೆ ಸಭೆ ನಡೆಸಿದ್ದೇವೆ.‌ಜೂನ್ ಮತ್ತು ಆಗಸ್ಟ್ ನಲ್ಲಿ‌ ಮಳೆ‌‌‌ ಕೊರತೆ‌ಯಾಗಿದೆ. ಶೇಕಡ 60ರಷ್ಟು ಬರ ಇದ್ದರೆ ಮಾತ್ರ ಕೇಂದ್ರ ಅನುದಾನ ಬಿಡುಗಡೆ ಮಾಡುತ್ತದೆ. ಇದನ್ನು 30% ಗೆ ಇಳಿಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಆ ಪತ್ರಕ್ಕೆ ಕೇಂದ್ರದಿಂದ ಉತ್ತರ ಬಂದಿಲ್ಲ. ಇದರಿಂದ ವಿಶೇಷ ಅನುದಾನವನ್ನು ಕೇಂದ್ರದಿಂದ ಕೇಳಿಲ್ಲ. 30%ಕ್ಕೆ ಇಳಿಸುವ ಬಗ್ಗೆ ಉತ್ತರ ಬಂದ ನಂತರ ಸಭೆ ನಡೆಸಿ ತೀರ್ಮಾನ‌ ಮಾಡಲಾಗುತ್ತದೆ. ಕಮಿಟಿ‌ ಮೀಟಿಂಗ್ ನಲ್ಲಿ ಬರ, ನೀರಿನ‌ ಪರಿಸ್ಥಿತಿಯ ವರದಿ‌ಯನ್ನ‌ ಅಧಿಕಾರಿಗಳ ಬಳಿ‌ ಕೇಳಿದ್ದೇವೆ ಎಂದು ಮಾಹಿತಿ ನೀಡಿದರು.

ತಮಿಳುನಾಡಿಗೆ ಕಾವೇರಿ‌ ನೀರು ಬಿಡುಗಡೆ ವಿಚಾರವಾಗಿ ಮಾತನಾಡಿ, ರೈತರ ಪ್ರತಿಭಟನೆಯ ಜೊತೆಗೆ, ಶಾಸಕರ ಅಸಮಾಧಾನದ ಬಗ್ಗೆಯೂ ತಿಳಿದಿದೆ‌. ನಮ್ಮ ರಾಜ್ಯದವರು ಕೇಂದ್ರದ ಕಮಿಟಿ‌ ಬಳಿ ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಆದರೆ ತಮಿಳುನಾಡು ಸಭೆಯಿಂದ ಹೊರ ನಡೆದಿದೆ.
ತಮಿಳುನಾಡಿನವರು 15 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕೇಳಿದ್ದರು. ನಾವು ಅದಕ್ಕೆ ಒಪ್ಪದ ಕಾರಣ ಅವರು ಸಭೆಯಿಂದ ಹೊರ ನಡೆದರು‌‌. ಸುಪ್ರೀಂಕೋರ್ಟ್ ಇಂದು ತಾತ್ಕಾಲಿಕ ತೀರ್ಪು ನೀಡಲಿದೆ‌. ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು.
ರಾಜ್ಯದ ರೈತರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ‌.
ಕಟ್ಟು ಪದ್ಧತಿಯಲ್ಲಿ ಬೆಳೆಗಳಿಗೆ ನೀರು ಬಿಡುಗಡೆ ಮಾಡುತ್ತಿದ್ದೇವೆ‌. 15 ದಿನಗಳಿಗೊಮ್ಮೆ ನೀರು ಬಿಡುಗಡೆ ಮಾಡುತ್ತಿದ್ದೇವೆ‌. ಸದ್ಯ ತಮಿಳುನಾಡಿಗೆ ನಿತ್ಯವೂ ಕೇಂದ್ರದ ತೀರ್ಮಾನದಂತೆ ನೀರು ಹರಿಸಲಾಗುತ್ತಿದೆ‌ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಯಾರ ಬಗ್ಗೆಯೂ ನಾನು ಮಾತನಾಡುವುದಿಲ್ಲ‌.
ಯಾರ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸುವುದಿಲ್ಲ ಎಂದು ಚೆಲುವರಾಯಸ್ವಾಮಿ ತಿಳಿಸಿದರು.

RELATED ARTICLES
- Advertisment -
Google search engine

Most Popular