ಚಳ್ಳಕೆರೆ: ತಾಲ್ಲೂಕಿನ ಜಡೆಕುಂಟೆ ಗ್ರಾಮದಲ್ಲಿ ವ್ಯಕ್ತಿ ಮೂರುವರೆ ಸಾವಿರಕ್ಕಿಂತ ಹೆಚ್ಚು ಬೆಲೆ ಬಾಳುವ ಮದ್ಯವನ್ನು ಅಕ್ರಮವಾಗಿ ಸಾಗಿಸುವ ವೇಳೆ ಅಬಕಾರಿ ನಿರಿಕ್ಷಕರು ದಾಳಿ ನಡೆಸಿ ಸುಮಾರು ಎಂಟರಿಂದ ಒಂಬತ್ತು ಲೀಟರ್ ಮದ್ಯವನ್ನು ಅಬಕಾರಿ ಇನ್ಸ್ಪೆಕ್ಟರ್ ಸಿ.ನಾಗರಾಜ್ ನೇತೃತ್ವದ ತಂಡ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಲೂಕು ಅಥವಾ ಯಾವುದೇ ಗ್ರಾಮದಲ್ಲಿ ಅಕ್ರಮ ಮದ್ಯಮಾರಾಟ ಕಂಡು ಬಂದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಇನ್ಸ್ಪೆಕ್ಟರ್ ನಾಗರಾಜ್ ಮಾಹಿತಿ ನೀಡಿದರು. ಅಕ್ರಮ ಮದ್ಯ ಮಾರಾಟದಿಂದ ಸಮಾಜದಲ್ಲಿ ಅಶಾಂತಿ ಉಂಟಾಗುತ್ತದೆ. ಆದ್ದರಿಂದ ಯಾರು ಅಕ್ರಮ ಮದ್ಯ ಮಾರಾಟವನ್ನು ಮಾಡಬಾರದು ಎಂದು ಅಬಕಾರಿ ಇನ್ಸ್ಪೆಕ್ಟರ್ ಎಚ್ಚರಿಕೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಇನ್ಸ್ಪೆಕ್ಟರ್ ಸಿ.ನಾಗರಾಜ್, ಸಬ್ ಇನ್ಸ್ಪೆಕ್ಟರ್ ರಂಗಸ್ವಾಮಿ, ತಿಪ್ಪಯ್ಯ, ನಾಗರಾಜ್ ತೋಳಮಟ್ಟಿ ಇನ್ನಿತರ ಅಬಕಾರಿ ಸಿಬ್ಬಂದಿಗಳು ಹಾಜರಿದ್ದರು.