Sunday, April 20, 2025
Google search engine

Homeಬ್ರೇಕಿಂಗ್ ನ್ಯೂಸ್ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ (ಕೆಎಸ್‌ಆರ್) ನಿಂತಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ತಾಂತ್ರಿಕ ಸಮಸ್ಯೆಯಿಂದ ಭಾರೀ ಅಗ್ನಿ ಅವಘಡ ಸಂಭವಿಸಿ ಬೆಂಕಿ ಕಾಣಿಸಿಕೊಂಡು ಎರಡು ಕೋಚ್‌ಗಳು ಹತ್ತಿ ಉರಿದಿದೆ.

ಈ ವೇಳೆ ರೈಲಿನೊಳಗೆ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಸುತ್ತಮುತ್ತಲ ರೈಲುಗಳಿಗೂ ಯಾವುದೇ ಹಾನಿಯುಂಟಾಗಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆನಡೆಸಿದ್ದಾರೆ.

ದಿಢೀರ್ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. ರೈಲ್ವೆ ನಿಲ್ದಾಣ , ಮೆಜೆಸ್ಟಿಕ್ ಬಸ್ ನಿಲ್ದಾಣದವರೆಗೆ ಹೊಗೆ ಆವರಿಸಿದೆ. ರೈಲು ಬೆಳಗ್ಗೆ ೬ ಗಂಟೆಗೆ ಕೆಎಸ್‌ಆರ್ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಬೆಳಗ್ಗೆ ೭.೩೦ ಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸದ್ಯ ಬೆಂಕಿ ತಗುಲಿದ ಬೋಗಿಯಿಂದ ಉಳಿದ ಬೋಗಿಗಳನ್ನು ಬೇರ್ಪಡಿಸಲಾಗಿದೆ. ಅದೃಷ್ಟವಶಾವತ್ ಯಾವುದೇ ಪ್ರಯಾಣಿಕರು ರೈಲಿನಲ್ಲಿ ಇರಲಿಲ್ಲ.

ತನಿಖೆ ಬಳಿಕ ಘಟನೆಗೆ ಕಾರಣ ಏನು ಎಂಬುವುದು ಗೊತ್ತಾಗಲಿದೆ, ಪ್ರಾಥಮಿಕ ಮಾಹಿತಿ ಪ್ರಕಾರ ತಾಂತ್ರಿಕ ದೋಷವೇ ಬೆಂಕಿ ಅನಾಹುತಕ್ಕೆ ಕಾರಣ ಎಂದು ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular