ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಮರು ಪ್ರತಿಷ್ಠಾಪನೆಗೆ ಆಗ್ರಹಿಸಿ ಬಾಗಲಕೋಟೆ ನಗರದಲ್ಲಿ ವಿವಿಧ ಹಿಂದೂಪರ ಸಂಘಟನೆ ಹಾಗೂ ಬಿಜೆಪಿ ವತಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿವೆ.
ನಗರದ ಬಸವೇಶ್ವರ ವೃತ್ತದಿಂದ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ.
ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ಮಾಜಿ ಎಂ.ಎಲ್.ಸಿ ನಾರಾಯಣಸಾ ಭಾಂಡಗೆ ಹಾಗೂ ಬಿಜೆಪಿ ಬೆಳಗಾವಿ ವಿಭಾಗದ ಸಹಪ್ರಭಾರಿ ಬಸವರಾಜ ಯಂಕಂಚಿ,ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ರಾಜು ನಾಯ್ಕರ್ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಮೆರವಣಿಗೆ ಬಳಿಕಸಭೆ ನಡೆಯಲಿದೆ.
ಬಾಗಲಕೋಟೆ ನಗರದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ವ್ಯಾಪಾರಸ್ಥರು ಬಂದ್ ಮಾಡಿದ್ದಾರೆ.
ನಗರದ ಸೋನಾರ ಬಡಾವಣೆಯ ಸಮೀಪ ಅನಧಿಕೃತವಾಗಿ ಸ್ಥಾಪಿಸಲಾಗಿದ್ದ ಮೂರ್ತಿಯನ್ನು ಜಿಲ್ಲಾಡಳಿತ ತೆರವುಗೊಳಿಸಿತ್ತು. ಜಿಲ್ಲಾಡಳಿತದ ಕ್ರಮ ಖಂಡಿಸಿ ಹಾಗೂ ಶಿವಾಜಿ ಮಹಾರಾಜರ ಮೂರ್ತಿ ಪುನರ್ ಪ್ರತಿಷ್ಠಾಪಿಸಲು ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಬಾಗಲಕೋಟೆ ನಗರದಲ್ಲಿ ಒಂದು ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.