Sunday, April 20, 2025
Google search engine

Homeರಾಜ್ಯಸುದ್ದಿಜಾಲಕುಡಿಯುವ ನೀರು, ಸ್ವಚ್ಛತೆ, ಪರಿಸರ ನೈರ್ಮಲ್ಯ ಕುರಿತು ಜನಜಾಗೃತಿ

ಕುಡಿಯುವ ನೀರು, ಸ್ವಚ್ಛತೆ, ಪರಿಸರ ನೈರ್ಮಲ್ಯ ಕುರಿತು ಜನಜಾಗೃತಿ

ಚಿತ್ರದುರ್ಗ: ಚಿತ್ರದುರ್ಗ ನಗರ ಸಮೀಪದ ಆಶ್ರಯ ಬಡಾವಣೆಯಲ್ಲಿ ಶನಿವಾರ ಕುಡಿಯುವ ನೀರು, ವೈಯಕ್ತಿಕ ಸ್ವಚ್ಛತೆ ಹಾಗೂ ಪರಿಸರ ನೈರ್ಮಲ್ಯ ಪಾಲನೆ ಕುರಿತು ಬೀದಿ ನಾಟಕ ಪ್ರದರ್ಶನದ ಮೂಲಕ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.

ನಗರದ ಆಶ್ರಯ ಬಡಾವಣೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಶುದ್ಧ ಕುಡಿಯುವ ನೀರು, ವೈಯಕ್ತಿಕ ಸ್ವಚ್ಛತೆ, ಪರಿಸರ ನೈರ್ಮಲ್ಯ ಪಾಲನೆ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ ಸಪ್ತಾಹ ಕಾರ್ಯಕ್ರಮಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಭೂಸ್ವಾಧೀನಾಧಿಕಾರಿ ವಿವೇಕ್ ಹಾಗೂ ಪ್ರೋಬೇಷನರಿ ತಹಶೀಲ್ದಾರ್ ಪ್ರತಿಭಾ ಅವರು ತಮಟೆ ಬಾರಿಸುವ ಮೂಲಕ ಚಾಲನೆ ನೀಡಿದರು.

ಆಟೋ ಪ್ರಚಾರದ ಮೂಲಕ ಕೈತೊಳೆಯುವ ಕುರಿತು, ಶುದ್ಧ ಕುಡಿಯುವ ನೀರು, ಶೌಚಾಲಯ ಬಳಕೆ, ಘನತ್ಯಾಜ್ಯ ವಸ್ತುಗಳ ಬಳಕೆ ವಿಲೇವಾರಿ ಹಾಗೂ ಬಿಸಿಯಾದ, ಮೆದು ಆಹಾರ ಸೇವನೆ ಮಾಡುವಂತೆ ಜಾಗೃತಿ ಮೂಡಿಸಲಾಯಿತು.

ಶಾಲಾ ಮತ್ತು ಅಂಗನವಾಡಿ ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ಕೈತೊಳೆಯುವ ವಿಧಾನ, ಪ್ರಾತ್ಯಕ್ಷಿಕೆ ನೀಡಿ, ಪ್ರತಿದಿನ ಮಕ್ಕಳು ಪ್ರಾರ್ಥನಾ ಸಮಯದಲ್ಲಿ ಪುನರ್ ಮನನ ಮಾಡಿಕೊಳ್ಳಲು ಶಿಕ್ಷಕರಿಗೆ ತಿಳಿಸಲಾಯಿತು. ಅಲ್ಲದೆ ಎಲ್ಲರೂ ಕಾಯಿಸಿ, ಆರಿಸಿದ ನೀರನ್ನೇ ಕುಡಿಯುವಂತೆ ಮನವಿ ಮಾಡಿದರು.ಆಶಾ ಕಾರ್ಯಕರ್ತರು ಆಶ್ರಯ ಬಡಾವಣೆಯ ಮನೆ ಮನೆಗೆ ಭೇಟಿ ನೀಡಿ, ಕುಟುಂಬದವರೊAದಿಗೆ ಮಾತುಕತೆ ನಡೆಸಿ, ಆರೋಗ್ಯ ಶಿಕ್ಷಣದ ಕುರಿತು ಮಾಹಿತಿ ಇರುವ ಕರಪತ್ರಗಳನ್ನು ನೀಡಲಾಯಿತು.

ವಾಂತಿ-ಭೇದಿ ಪ್ರಕರಣ ಕಂಡುಬದ ಸುತ್ತಮುತ್ತಲಿನ ಮನೆಗಳಿಗೆ ಭೇಟಿ ನೀಡಿ, ಗುಂಪು ಸಭೆ, ಅಂತರ್ ವೈಯಕ್ತಿಕ ಸಮಾಲೋಚನಾ ಮೂಲಕ ಭರವಸೆ ಹಾಗೂ ಧೈರ್ಯ ನೀಡಲಾಯಿತು. ವಾಂತಿ-ಭೇದಿ ಪ್ರಕರಣಗಳನ್ನು ತಾತ್ಕಾಲಿಕವಾಗಿ ಚಿಕಿತ್ಸಾ ಘಟಕಕ್ಕೆ ಕಳುಹಿಸಲು ಸೂಚಿಸಲಾಯಿತು. ಒಆರ್‌ಎಸ್ ಪಾಕೆಟ್‌ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಾಶಿ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಗಿರೀಶ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೌರಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ರೋಗ ಶಾಸ್ತçಜ್ಞ ಡಾ.ರುದ್ರೇಶ್ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ನಗರಸಭೆ ಸಿಬ್ಬಂದಿ ಇದ್ದರು.

RELATED ARTICLES
- Advertisment -
Google search engine

Most Popular