ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಮಹಾನಗರಪಾಲಿಕೆ ಹಾಗೂ ಬಿಐ ಯೋಜನೆ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಮಹಾನಗರಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ತಂಬಾಕು ಮಾರಾಟ ಪರವಾನಗಿ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಮಹಾನಗರಪಾಲಿಕೆ ಪಶು ವೈದ್ಯಾಧಿಕಾರಿ ಡಾ.ರೇಖಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಲ್ಲಪ್ಪ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್ ಕೆ ಎಂ, ಸಮಾಜ ಕಾರ್ಯಕರ್ತ ರವಿರಾಜ್ ಜಿ ಕೆ, ಆಪ್ತ ಸಮಾಲೋಚಕರಾದ ಶಿವಕುಮಾರ್, ಡಿಇಓ ಪ್ರವೀಣ ಕೆ. ಇವರು ಉಪಸ್ಥಿತರಿದ್ದರು.
ಬೆಂಗಳೂರಿನ ಬಿ ಐ ಯೋಜನೆಯ ಪ್ರಭಾಕರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು, ಜೇಲ್ ಥಾಮಸ್ ಇವರು ಕಾರ್ಯಕ್ರಮದ ನಿರ್ವಹಣೆ ಮಾಡಿದರು.