Saturday, April 19, 2025
Google search engine

Homeರಾಜ್ಯಸುದ್ದಿಜಾಲಕ್ರೀಡಾಕೂಟದಲ್ಲಿ ಕ್ರೀಡಾ ಸ್ಪೂರ್ತಿ ಗುಣ ಮೈಗೂಡಿಸಿಕೊಳ್ಳಿ: BEO ಬಸವರಾಜು ಸಲಹೆ

ಕ್ರೀಡಾಕೂಟದಲ್ಲಿ ಕ್ರೀಡಾ ಸ್ಪೂರ್ತಿ ಗುಣ ಮೈಗೂಡಿಸಿಕೊಳ್ಳಿ: BEO ಬಸವರಾಜು ಸಲಹೆ

ಪಿರಿಯಾಪಟ್ಟಣ: ಕ್ರೀಡಾಕೂಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿ ಗುಣ ಮೈಗೂಡಿಸಿಕೊಳ್ಳುವಂತೆ ಬಿಇಓ ಬಸವರಾಜು ಹೇಳಿದರು.
ತಾಲೂಕಿನ ಬೆಟ್ಟದಪುರದ ಅಕ್ಕಮಹಾದೇವಿ ಕ್ರೀಡಾಂಗಣದಲ್ಲಿ ಡಿಟಿಎಂಎನ್ ಶಾಲೆ ಸಹಯೋಗದಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕ್ರೀಡಾಕೂಟಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ ಸೋತಾಗ ಕುಗ್ಗದೇ ಗೆದ್ದಾಗ ಹಿಗ್ಗದೆ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿದಾಗ ಸಾಧನೆಯ ಗುರಿ ತಲುಪಬಹುದು ಎಂದರು.
ಡಿಟಿಎಮ್ಎನ್ ವಿದ್ಯಾಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ್ ಅವರು ಮಾತನಾಡಿ ಶಾಲೆ ಹಂತದಲ್ಲಿ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ನಾಯಕತ್ವ ಗುಣ ಬೆಳೆಸಿಕೊಳ್ಳಬಹುದಾಗಿದೆ.

ವಿದ್ಯಾರ್ಥಿಗಳಲ್ಲಿರುವ ವಿವಿಧ ಕ್ರೀಡಾ ಚಟುವಟಿಕೆಗಳ ಆಸಕ್ತಿ ಗುರುತಿಸಿ ಸೂಕ್ತ ತರಬೇತಿ ನೀಡಿದಾಗ ಜಿಲ್ಲೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದರು. ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರಘುಪತಿ ಅವರು ಮಾತನಾಡಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು. ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಭುವನಹಳ್ಳಿ ಸರ್ಕಾರಿ ಪ್ರೌಢಶಾಲೆ ಪಾಲಾಯಿತು.

ಬೆಟ್ಟದಪುರ ಎಸ್ಎಂಎಸ್ ವಿದ್ಯಾಸಂಸ್ಥೆ ದ್ವಿತೀಯ ಸ್ಥಾನ ಪಡೆಯಿತು. ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ಬಾಲಕರ ವಿಭಾಗದಲ್ಲಿ ಡಿಟಿಎಂಎನ್ ವಿದ್ಯಾಸಂಸ್ಥೆಯ ಪ್ರೀತಮ್ ಹಾಗೂ ದರ್ಶನ್ ರಾಜ್ ಬಾಲಕಿಯರ ವಿಭಾಗದಲ್ಲಿ ಎಸ್ಎಂಎಸ್ ವಿದ್ಯಾಸಂಸ್ಥೆಯ ಪ್ರಾರ್ಥನಾ ಪಾಲಾಯಿತು.

ಈ ಸಂದರ್ಭ ಡಿಟಿಎಂಎನ್ ವಿದ್ಯಾ ಸಂಸ್ಥೆ ನಿರ್ದೇಶಕರಾದ ಗುರುದತ್, ರವಿಕುಮಾರ್, ಸುಂದರೇಶ್, ವಿಜಯ್ ಕುಮಾರ್, ಆಡಳಿತಾಧಿಕಾರಿ ನಟರಾಜ್, ಪ್ರಾಂಶುಪಾಲ ಸತೀಶ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಮುರುಳಿ ಕೃಷ್ಣ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಜರೀನಾ ಖಾನಮ್, ಭುವನಹಳ್ಳಿ ಸರ್ಕಾರಿ ಪ್ರೌಢಶಾಲೆ ಎಸ್ ಡಿಎಂಸಿ ಅಧ್ಯಕ್ಷ ಹೇಮಪ್ರಭ, ಮುಖಂಡ ನಾಗೇಂದ್ರ ಹಾಗೂ ವಿವಿಧ ಶಾಲಾ ಮುಖ್ಯಶಿಕ್ಷಕರು, ಶಿಕ್ಷಕರು, ದೈಹಿಕ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.

RELATED ARTICLES
- Advertisment -
Google search engine

Most Popular