ಮಡಿಕೇರಿ: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾದ ಪರಿಣಾಮ ನಗರದ ಹೃದಯ ಭಾಗದಲ್ಲಿದ್ದ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿದೆ.
ಇಂದು ಮುಂಜಾನೆ ಡಿಪೋದಿಂದ ಬಸ್ ನಿಲ್ದಾಣಕ್ಕೆ ಹೊರಟಿದ್ದ ಬಸ್ ಪಿಕಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಜನರಲ್ತಿಮ್ಮಯ್ಯ ವೃತ್ತಕ್ಕೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ.
ಬಸ್ ಡಿಕ್ಕಿ ಹೊಡೆದ ಪರಿಣಾಮ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿದ್ದು, ಬಸ್ ಚಾಲಕ ಹಾಗೂ ನಿರ್ವಾಹಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ತಿಮ್ಮಯ್ಯ ಅವರ ಪ್ರತಿಮೆಯನ್ನು ತಿಮ್ಮಯ್ಯ ಸ್ಮಾರಕ ಭವನದ ಆವರಣಕ್ಕೆ ಸ್ಥಳಾಂತರಿಸಲಾಗಿದೆ.
ಘಟನೆ ಕುರಿತು ವಿಷಾದ ವ್ಯಕ್ತಪಡಿಸಿರುವ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ವೀರು ಸೇನಾನಿ ತಿಮ್ಮಯ್ಯ ಅವರ ಪ್ರತಿಮೆಯನ್ನು ಪುನರ್ ಪ್ರತಿಷ್ಠಾಪಿಸಲು ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.