ಮಂಡ್ಯ: ಮಂಡ್ಯದ ಸಂಜಯ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ಮುಕ್ತಾಯದ ಬಳಿಕ ರೈತ ಸಂಘ ಹೆದ್ದಾರಿ ಮಧ್ಯೆ ಕುಳಿತ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ರೈತಸಂಘದ ಕೆಲ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.
ಪ್ರತಿಭಟನೆ ವೇಳೆ ಸರ್ಕಾರ ತಮಿಳುನಾಡಿಗೆ ನೀರು ಹರಿಸಿರುವುದಕ್ಕೆ ರೈತ ಮಹಿಳೆ ಗೌರಮ್ಮ ಕಿಡಿಕಾರಿದ್ದು, ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಹಾಗೂ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.