ಚಿತ್ರದುರ್ಗ: ಇದೇ ಆಗಸ್ಟ್ 31ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಭಕ್ತಿಭಾವನೆಯಿಂದ ಆಚರಿಸಲು ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಿಸುವ ಸಂಬಂಧ ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಗಸ್ಟ್ 31ರಂದು ಮಹನೀಯರ ಜಯಂತಿಯನ್ನು ಶಿಷ್ಟಾಚಾರದ ಅನುಸಾರ ಜಯಂತಿ ಕಾರ್ಯಕ್ರಮಗಳನ್ನು ಆಚರಿಸಲು ತೀರ್ಮಾನಿಸಲಾಯಿತು.
ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದ ಮಹನೀಯರ ಆದರ್ಶ ಪಾಲನೆ ಮಾಡಬೇಕು. ಮಹನೀಯರ ಜೀವನ, ಬೋಧನೆ, ಅವರ ವಚನಗಳು, ತತ್ವ ಸಂದೇಶಗಳ ಬಗ್ಗೆ ಜನರಲ್ಲಿ ಅರಿವು ಹಾಗೂ ಕಾಯಕ ಪ್ರಜ್ಞೆ ಮೂಡಿಸುವ ಕೆಲಸವಾಗಬೇಕು. ಸಮಾಜವು ಶೈಕ್ಷಣಿಕ ವಿಚಾರದಲ್ಲಿ ಪ್ರಗತಿ ಹೊಂದಬೇಕು ಎಂದರು.
ನುಲಿಯ ಚಂದಯ್ಯ ಜಯಂತಿ: ಇದೇ ಆಗಸ್ಟ್ 31ರಂದು ಅಂದು ಮಧ್ಯಾಹ್ನ 01 ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 10ಕ್ಕೆ ನಗರದ ನೀಲಕಂಠೇಶ್ವರ ದೇಗುಲದಿಂದ ನಗರದ ತರಾಸು ರಂಗಮಂದಿರದವರೆಗೆ ಮೆರವಣಿಗೆ ಕಾರ್ಯಕ್ರಮ ಆಯೋಜಿಸಲಾಗುವುದು. ನುಲಿಯ ಚಂದಯ್ಯ ಅವರ ಕುರಿತು ಉಪನ್ಯಾಸ ನೀಡಲು ಸಾಹಿತಿಗಳು, ಸಂಪನ್ಮೂಲ ವ್ಯಕ್ತಿಗಳ ಹೆಸರನ್ನು ಶೀಘ್ರ ಅಂತಿಮಗೊಳಿಸಲಾಗುವುದು ಎಂದು ಸಮಾಜದ ಮುಖಂಡರು ತಿಳಿಸಿದರು.
ಸಭೆಯಲ್ಲಿ ಕೊರಚ ಕೊರಮ ಸಮಾಜ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಕೃಷ್ಣಪ್ಪ, ಕಾರ್ಯದರ್ಶಿ ದಾರುಕೇಶ್, ಉಪಾಧ್ಯಕ್ಷ ರಾಮಪ್ಪ, ನಿರ್ದೇಶಕರಾದ ತಿಪ್ಪೇಸ್ವಾಮಿ, ಪರಮೇಶ್ವರಪ್ಪ, ಶಿವಮೂರ್ತಿ, ಕೊರಚ ಸಮಾಜದ ಅಧ್ಯಕ್ಷ ವೈ.ಕುಮಾರ್, ಕಾರ್ಯದರ್ಶಿ ಧನಂಜಯ, ಗೌರವಾಧ್ಯಕ್ಷರಾದ ಹನುಮಂತಪ್ಪ, ಹುಚ್ಚಪ್ಪ, ನಿರ್ದೇಶಕರಾದ ಮಂಜುನಾಥ್, ಪುಷ್ಟರಾಜ್, ನಗರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ನಯೀಂ ಅಹ್ಮದ್, ತೋಟಗಾರಿಕೆ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಸಭೆಯಲ್ಲಿ ಆರ್ಯ ಈಡಿಗರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಜೀವನ್, ಕಾರ್ಯದರ್ಶಿ ಮಂಜುನಾಥ್, ನಿರ್ದೇಶಕರಾದ ಶಿವಮಂಜುನಾಥ್, ಡಿ.ಸ್ವಾಮಿ, ಮಹಾರುದ್ರಪ್ಪ, ಯುವ ವೇದಿಕೆಯ ವೆಂಕಟೇಶ್, ಶ್ರೀನಿವಾಸ್, ನಗರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ನಯೀಂ ಅಹ್ಮದ್, ರಂಗಕರ್ಮಿ ಕೆ.ಪಿ.ಎಂ. ಗಣೇಶಯ್ಯ, ತೋಟಗಾರಿಕೆ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಗಣ್ಯರು, ಸಮಾಜದ ಮುಖಂಡರು ಇದ್ದರು.