ಬೆಂಗಳೂರು: ಪಡಿತರ ಚೀಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ವಿಳಾಸ ಬದಲಾವಣೆ ಅವಧಿಯನ್ನು ಮತ್ತಷ್ಟು ವಿಸ್ತರಿಸಿರುವುದಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
”ಸೋಮವಾರದವರೆಗೆ ಮಾತ್ರ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಸರ್ವರ್ ಸಮಸ್ಯೆಯನ್ನು ನಿವಾರಿಸುವ ಹಿನ್ನೆಲೆಯಲ್ಲಿ ಹಂತ-ಹಂತವಾಗಿ ಗ್ರಾಹಕರಿಗೆ ಅವಕಾಶ ನೀಡಲಾಗುವುದು. ಆನ್‌ಲೈನ್ ಅಥವಾ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಸೇವೆ ಪಡೆಯಬಹುದು,” ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಾರ್ವಜನಿಕ ವಿತರಣೆ (ವಿಜಿಲೆನ್ಸ್) ಹೆಚ್ಚುವರಿ ನಿರ್ದೇಶಕ ಜ್ಞಾನೇಂದ್ರಕುಮಾರ್ ಗಂಗ್ವಾರ್ ತಿಳಿಸಿದ್ದಾರೆ.