ಗದಗ: ಕಳಪೆ ಕಾಮಗಾರಿ ಖಂಡಿಸಿ ಪೊರಕೆಯಿಂದ ರಸ್ತೆ ಸ್ವಚ್ಛ ಮಾಡುವ ಮೂಲಕ ಕರವೇ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಗದಗ ಜಿಲ್ಲೆ ಲಕ್ಷ್ಮೇಶ್ವರ ದಿಂದ ಮಾಗಡಿ ರಸ್ತೆವರೆಗಿನ 9.95 ಲಕ್ಷ ವೆಚ್ಚದಲ್ಲಿ ನಡೆದಿರುವ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, PWD ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ರಸ್ತೆ ಮರು ಕಾಮಗಾರಿ ಮಾಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.