ಬೆಂಗಳೂರು: ಸಣ್ಣ ಗುತ್ತಿಗೆದಾರರಿಗೆ ಬಿಬಿಎಂಪಿ ಗುಡ್‍ನ್ಯೂಸ್ ನೀಡಿದೆ. 25 ಲಕ್ಷ ರೂ. ಒಳಗಿನ ಕಾಮಗಾರಿ ನಡೆಸಿದ ಗುತ್ತಿಗೆದಾರರ ಬಿಲ್ ಕ್ಲಿಯರ್ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ. ಕಳೆದ ಹಲವಾರು ದಿನಗಳಿಂದ ಬಿಲ್‍ಬಿಡುಗಡೆಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ಸಣ್ಣ ಗುತ್ತಿಗೆದಾರರಿಗೆ ಬಿಲ್ ಕ್ಲಿಯರ್ ಮಾಡಲು ಮೊದಲ ಹಂತದಲ್ಲಿ 42 ಕೋಟಿ ಹಣ ಬಿಡುಗಡೆ ಮಾಡಲಾಗಿದೆ.
ಉಳಿದ ಗುತ್ತಿಗೆದಾರರ ಬಾಕಿ ಬಿಲ್ ತನಿಖಾ ವರದಿ ಬಂದ ಬಳಿಕ ಹಂತ ಹಂತವಾಗಿ ಬಿಲ್ ಬಿಡುಗಡೆ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.