ಮೈಸೂರು: ನೈಋತ್ಯ ರೈಲ್ವೆ, ಮೈಸೂರು ವಿಭಾಗವು ರೈಲು ಸಂಖ್ಯೆ 12007/12008 ಚೆನ್ನೈ-ಮೈಸೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆಸ್‌ನ ಸೇವೆಗಳನ್ನು 20.12.2023 ರಿಂದ ಜಾರಿಗೆ ಬರುವಂತೆ ವಾರದಲ್ಲಿ ಆರು ದಿನಗಳಿಗೆ ನಿಗದಿಪಡಿಸಿದೆ. ಗುರುವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿಯೂ ಸೇವೆ ಲಭ್ಯವಿರುತ್ತದೆ.
ಈ ಹಿಂದೆ ಬುಧವಾರದಂದು ಶತಾಬ್ದಿ ಸೇವೆ ಲಭ್ಯವಿರಲಿಲ್ಲ. ಪರಿಷ್ಕೃತ ವೇಳಾಪಟ್ಟಿಯೊಂದಿಗೆ, ಪ್ರಯಾಣಿಕರು ಈಗ ಗುರುವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಶತಾಬ್ದಿ ಎಕ್ಸ್ ಪ್ರೆಸ್ ನಲ್ಲಿ ಪ್ರಯಾಣಿಸುವ ಅವಕಾಶವನ್ನು ಹೊಂದಿರುತ್ತಾರೆ.
ಈ ಬದಲಾವಣೆಯು ಮೈಸೂರು ಮತ್ತು ಚೆನ್ನೈ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲತೆ ಮತ್ತು ಆಯ್ಕೆಗಳನ್ನು ಒದಗಿಸುವ ಗುರಿಯನ್ನು ನೀಡಲಿದೆ ಮತ್ತು ಈ ಬದಲಾವಣೆಯು ತಮ್ಮ ದೈನಂದಿನ ಪ್ರಯಾಣದ ಅಗತ್ಯಗಳಿಗಾಗಿ ಶತಾಬ್ದಿ ಸೇವೆಯನ್ನು ಅವಲಂಬಿಸಿರುವ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ಇದಲ್ಲದೆ, ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ಸೇವೆಯು ವಾರದಲ್ಲಿ ಬುಧವಾರ ಹೊರತುಪಡಿಸಿ ಉಳಿದ ಆರು ದಿನಗಳು ಮುಂದುವರಿಯುತ್ತದೆ ಎಂದು ಸಾರ್ವಜನಿಕರಿಗೆ ತಿಳಿಸಲಾಗಿದೆ.
ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತೊಂದು ‘ಹೈಸ್ಪೀಡ್’ ರೈಲು ಸೇವೆಯಾಗಿದ್ದು ಅದು ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ ಮತ್ತು ಪ್ರಯಾಣಿಕರಿಗೆ ಐಶಾರಾಮಿ ಪ್ರಯಾಣದ ಅನುಭವವನ್ನು ನೀಡುತ್ತದೆ.
ರೈಲು ವೇಳಾಪಟ್ಟಿಯಲ್ಲಿನ ಈ ಬದಲಾವಣೆಗಳನ್ನು ಗಮನಿಸಿ ಅದಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳಲು ಪ್ರಯಾಣಿಕರಿಗೆ ಈ ಮೂಲಕ ತಿಳಿಸಲಾಗುತ್ತಿದೆ. ಚೆನ್ನೈ-ಮೈಸೂರು-ಚೆನ್ನೈ ನಡುವೆ ಶತಾಬ್ದಿ ಎಕ್ಸ್ ಪ್ರೆಸ್ ಮತ್ತು ವಂದೇ ಭಾರತ್ ಎಕ್ಸ್‌ಪ್ರೆಸ್ ಎರಡೂ ರೈಲು ಗಾಡಿಗಳ ಪರಿಷ್ಕೃತ ವೇಳಾಪಟ್ಟಿಗಳು ಡಿಸೆಂಬರ್ 20 ರಿಂದ ಜಾರಿಗೆ ಬರಲಿವೆ.