Saturday, April 19, 2025
Google search engine

Homeರಾಜ್ಯಮಂಗಳೂರು: ಮನೆಯಲ್ಲಿ ನೇಣಿಗೆ ಶರಣಾದ ಬೇಕರಿ ಮಾಲೀಕ

ಮಂಗಳೂರು: ಮನೆಯಲ್ಲಿ ನೇಣಿಗೆ ಶರಣಾದ ಬೇಕರಿ ಮಾಲೀಕ

ಮಂಗಳೂರು(ದಕ್ಷಿಣ ಕನ್ನಡ): ಎರಡು ಬೇಕರಿ ಅಂಗಡಿಯನ್ನು ಹೊಂದಿದ್ದ ಮಾಲೀಕ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕುತ್ತಾರು ಸಮೀಪದ ಶಾಂತಿಬಾಗ್ ಎಂಬಲ್ಲಿ ನಡೆದಿದೆ.

ಹಾಸನ ಜಿಲ್ಲೆ ಹಳೇಬೀಡು ರಸ್ತೆಯ ಬಲ್ಲೇನಹಳ್ಳಿ ನಿವಾಸಿ ರುದ್ರೇಶ್‌ (36) ಆತ್ಮಹತ್ಯೆ ಮಾಡಿಕೊಂಡವರು. ಇವರು ಪತ್ನಿ, ಮಕ್ಕಳೊಂದಿಗೆ ಶಾಂತಿಬಾಗ್‌ ಬಳಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಈ ಹಿಂದೆ ಸಂತೋಷನಗರ ಎಂಬಲ್ಲಿದ್ದವರು ಕೆಲ ದಿನಗಳ ಹಿಂದಷ್ಟೇ ಇಲ್ಲಿನ ಬಾಡಿಗೆ ಮನೆಗೆ ಬಂದಿದ್ದರು.

ಕುತ್ತಾರು ಹಾಗೂ ಯೆನೆಪೋಯ ಆಸ್ಪತ್ರೆ ಬಳಿ ಬೆಂಗಳೂರ್‌ ಅಯ್ಯಂಗಾರ್‌ ಬೇಕರಿಯನ್ನು ನಡೆಸುತ್ತಾ ಬಂದಿದ್ದರು. ಇಂದು ಬೆಳಗ್ಗೆ ಬೇಕರಿಯಿಂದ ಮನೆಗೆ ಚಹಾ ಕುಡಿಯಲೆಂದು ಬಂದವರು ವಾಪಸ್ಸು ಹೋಗಿರಲಿಲ್ಲ. ಮನೆಯಲ್ಲಿ ಪತಿ ರುದ್ರೇಶ್‌ ಒಂದು ಕೋಣೆಯಲ್ಲಿ ಮಲಗಿದ್ರೆ ಪತ್ನಿ ಹೇಮಲತಾ ಇನ್ನೊಂದು ಕೋಣೆಯಲ್ಲಿ ಮಲಗಿದ್ದರು. ಸಂಜೆ ಪತ್ನಿ ಹೇಮಲತಾ ನಿದ್ರೆಯಿಂದ ಎದ್ದಾಗ ಪತಿ ಏಳದೇ ಇರುವುದನ್ನು ಗಮನಿಸಿ ಬಾಗಿಲು ಮುರಿದು ನೋಡಿದಾಗ ರುದ್ರೇಶ್‌ ಕೋಣೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular