ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ.
ಆಗಸ್ಟ್ 17 ರ ರಾತ್ರಿ 11-30 ಗಂಟೆಯಿಂದ ಆಗಸ್ಟ್ 18 ರ ಬೆಳಗ್ಗಿನ ಮಧ್ಯೆ ಮಂಗಳೂರು ತಾಲೂಕು ಬೈಕಂಪಾಡಿ ಗ್ರಾಮದ ಬೈಕಂಪಾಡಿಯ ಎ.ಪಿ.ಎಂ.ಸಿ ಕಟ್ಟಡದ ವಾಣಿಜ್ಯ ಮಳಿಗೆಯ ಹಿಂಭಾಗದ ಹಳೆಯ ಹರಾಜು ಕಟ್ಟಡದ ಒಳಗಡೆ ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನು ಮಾರಕಾಯುಧಗಳಿಂದ ಗಾಯಗೊಂಡು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕುರಿತು ತನಿಖೆ ಮುಂದುವರಿಸಿದ ಪಣಂಬೂರು ಪೊಲೀಸ್ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮನು ಸೆಬಾಸ್ಟಿಯನ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.