ಹಾವೇರಿ: ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಗೆ ಹೋದ್ರೂ ಮಂತ್ರಿಸ್ಥಾನ ಸಿಗಲ್ಲ. ಕ್ಷೇತ್ರದಲ್ಲಿ ಹೆಚ್ಚಿನ ಅನುದಾನ ಸಿಗಬಹುದು ಅಷ್ಟೆ ಎಂದು ಮಾಜಿ ಸಚಿವ ಬಿ.ಸಿ ಪಾಟೀಲ್ ಹೇಳಿದರು.
ಎಸ್ .ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಮಾತನಾಡಿದ ಬಿ.ಸಿ ಪಾಟೀಲ್, ಪಕ್ಷ ಬಿಟ್ಟವರನ್ನ ಸೇರಿಸಿಕೊಳ್ಳಲ್ಲ ಎಂದು ಸಿದ್ಧರಾಮಯ್ಯ ಹೇಳಿದ್ರು. ಆದರೆ ಈಗ 136 ಶಾಸಕರಿದ್ದರೂ ಶಾಸಕರನ್ನ ಸೇರಿಕೊಳ್ಳುವ ಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮೂರು ಗುಂಪುಗಳಿವೆ ಪರಮೇಶ್ವರ್, ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಗುಂಪುಗಳಿವೆ. ಗಮನ ಬೇರೆಡೆ ಸೇಳೆಯಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.