ಮಂಡ್ಯ: ದೇವಸ್ಥಾನದ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನಿಸಿದ ಕಳ್ಳನನ್ನು ಹಿಡಿದು ಗ್ರಾಮಸ್ಥರು ಧರ್ಮದೇಟು ನೀಡಿರುವ ಘಟನೆ ಪಾಂಡವಪುರ ತಾಲ್ಲೂಕಿನ ಕನಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಮೈಸೂರು ಮೂಲದ ಮುಬಾರಕ್ ಗ್ಯಾಂಗ್ ಗ್ರಾಮದ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು, ದೇವಸ್ಥಾನದ ಬೀಗ ಮುರಿದು ದೇವಸ್ಥಾನ ಪ್ರವೇಶ ಮಾಡಿದ್ದಾರೆ. ವಿಚಾರ ತಿಳಿದು ದೇವಸ್ಥಾನ ಸುತ್ತುವರಿದ ಗ್ರಾಮಸ್ಥರು ಕಳ್ಳರಿಗೆ ಶರಣಾಗುವಂತೆ ಸೂಚಿಸಿದ್ದಾರೆ.
ಈ ವೇಳೆ ಮಾರಕಾಸ್ತ್ರ ತೋರಿಸಿ ಗ್ರಾಮಸ್ಥರನ್ನು ಬೆದರಿಸಿ ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಗ್ಯಾಂಗ್’ನ ಓರ್ವ ಕಳ್ಳ ಮುಬಾರಕ್ ನನ್ನು ಗ್ರಾಮಸ್ಥರು ಹಿಡಿದು ಥಳಿಸಿದ್ದಾರೆ/
ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಕಳ್ಳನನ್ನು ವಶಕ್ಕೆ ಪಡೆದಿದ್ದಾರೆ.
ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.