ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಭಾರತೀಯ ಕಿಸಾನ್ ಸಂಘದಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಕಾವೇರಿ ನಮ್ಮದು, ರೈತರಿಗೆ ಅನ್ಯಾಯವಾಗುತ್ತಿದೆ. ಕೆಆರ್‌ಎಸ್ ಡ್ಯಾಂನಲ್ಲಿ ನೀರು ಬರಿದಾಗುತ್ತಿದೆ. ಸರ್ಕಾರ ನ್ಯಾಯಾಲಯಕ್ಕೆ ವಸ್ತುಸ್ಥಿತಿಯ ಮನವರಿಕೆ ಮಾಡಬೇಕಾಗಿತ್ತು. ರಾಜ್ಯ ಸರ್ಕಾರ ಏಕಾಏಕಿ ತಮಿಳುನಾಡಿಗೆ ನೀರು ಬಿಡುತ್ತಿದೋದು ಖಂಡನೀಯವಾಗಿದ್ದು, ಮಂಡ್ಯ ಜಿಲ್ಲೆಯ ರೈತರಿಗೆ ಸರ್ಕಾರ ಮೋಸ ಮಾಡ್ತಾ ಇದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೀಗೆ ನೀರು ಬಿಟ್ರೆ ಬೆಳೆಗೆ ಮಾತ್ರವಲ್ಲ ಕುಡಿಯಲು ನೀರು ಇರಲ್ಲ. ಕೂಡಲೇ ತಮಿಳುನಾಡಿಗೆ ಬಿಡ್ತಾ ಇರೋ ನೀರನ್ನು ನಿಲ್ಲಿಸಬೇಕು. ಇಲ್ಲವಾದರೆ ಅಮರಣಾಂತ ಉಪವಾಸ ಮಾಡುವುದಾಗಿ ಸರ್ಕಾರಕ್ಕೆ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.