ಹನೂರು: ತಾಲೂಕು ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳ ಹಾವಳಿಯಿಂದ ಆಗುತ್ತಿರುವ ಅನಾಹುತವನ್ನು ತಪ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಮಾಜಿ ಶಾಸಕ ಆರ್.ನರೇಂದ್ರ ಆಗ್ರಹಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕ್ಷೇತ್ರ ವ್ಯಾಪ್ತಿಯ ಹಲವು ಕಡೆಗಳಲ್ಲಿ ಆನೆ ಸೇರಿದಂತೆ ಇತರೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಕಾಡುಪ್ರಾಣಿಗಳ ಹಾವಳಿ ತಪ್ಪಿಸಿ ಜನರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು. ಈ ಸಂಬಂಧ ಅರಣ್ಯ ಸಚಿವರೊಂದಿಗೆ ಮಾತನಾಡಿದ್ದೇನೆ. ಅರಣ್ಯ ಪಡೆಯನ್ನು ಜಾಸ್ತಿ ಮಾಡಬೇಕು. ಆಗ ಮಾತ್ರ ಸಂಘರ್ಷ ತಪ್ಪಿಸಲು ಸಾಧ್ಯ ಎಂದರು.
ಬರಗಾಲ ಸಂದರ್ಭದಲ್ಲಿ ಕುಡಿಯುವ ನೀರು, ಮೇವು ಸಿಗದ ಕಾರಣ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳ ಬೇಟೆ ಹೆಚ್ಚಾಗಿದೆ. ಇದನ್ನು ತಪ್ಪಿಸಲು ಅಧಿಕಾರಿಗಳು ಮುಂದಾಗಬೇಕು. ಜಿಲ್ಲೆಯಲ್ಲಿ ಸೂಕ್ತ ಮಳೆಯಾಗಿಲ್ಲದ ಕಾರಣ ಬಿತ್ತನೆಯಾಗಿಲ್ಲ. ಹನೂರು ತಾಲೂಕಿನಲ್ಲಿ ಜಾನುವಾರುಗಳ ಮೇಲೆ ಜನತೆ ಅವಲಂಬಿತರಾಗಿರುವುದರಿಂದ ಮೇವಿನ ಕೊರತೆ ಎದುರಾಗಿದ್ದು ಮುಂದಿನ ದಿನಗಳಲ್ಲಿ ಮಳೆ ಆಗದಿದ್ದರೆ ಜಿಲ್ಲಾಡಳಿತ ಸರ್ಕಾರಕ್ಕೆ ಪತ್ರ ಬರೆದು ಗೋ ಶಾಲೆ ನಿರ್ಮಾಣ ಮಾಡಬೇಕು. ಗೋಶಾಲೆ ತೆರೆಯದಿದ್ದರೆ ಎಂದರು.