Saturday, April 19, 2025
Google search engine

Homeರಾಜ್ಯಸುದ್ದಿಜಾಲಜಿ.ಪಂ.ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಜಿ.ಪಂ.ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಮಡಿಕೇರಿ: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಸಾಮಥ್ರ್ಯ ಸೌಧದಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಜಿ.ಪಂ.ಸಿಇಒ ವರ್ಣಿತ್ ನೇಗಿರವರ ನೇತೃತ್ವದಲ್ಲಿ ನಡೆಯಿತು.

ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಗತಿ ಕುಂಠಿತಗೊಂಡಿದ್ದು ತ್ವರಿತವಾಗಿ ಪ್ರಗತಿ ಸಾಧಿಸಿ, ಗ್ರಾಮ ಪಂಚಾಯಿತಿಗಳಲ್ಲಿ ಶೂನ್ಯ ಮಾನವ ದಿನಗಳ ಸೃಜನೆಯಾಗದಂತೆ ಕ್ರಮ ವಹಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಾರತ್ ನಿರ್ಮಾಣ್ ಸೇವಾ ಕೇಂದ್ರ, NRLM WORK SHED ಕಾಮಗಾರಿಗಳನ್ನು ಆರ್ಥಿಕ ವರ್ಷದಲ್ಲೆ ಪೂರ್ಣಗೊಳಿಸಿಲು ತಿಳಿಸಿದರು.

ಸ್ವಚ್ಚ ಭಾರತ್ ಮೀಷನ್ ಯೋಜನೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಕಸವನ್ನು ವ್ಯವಸ್ಥಿತವಾಗಿ ನಿರ್ವಹಿಸಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಜಿ.ಪಂ.ಸಿಇಒ ಅವರು ಹೇಳಿದರು. ವಸತಿ ಯೋಜನೆಯಡಿ ತಾಲ್ಲೂಕಿನಲ್ಲಿ ಮಳೆಗೆ ಹಾನಿಯಾದ ಮನೆಗಳ ಕುರಿತು ಮಾಹಿತಿ ಪಡೆದು ಪ್ರಗತಿ ಸಾಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ವರ್ಣಿತ್ ನೇಗಿ ಅವರು ಸೂಚಿಸಿದರು.

ಜಿ.ಪಂ.ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಕಾಲಮಿತಿ ಒಳಗೆ ಗ್ರಾಮ ಪಂಚಾಯಿತಿಗಳಲ್ಲಿ ಪ್ರಗತಿ ಸಾಧಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿರಾಜಪೇಟೆ ತಾ.ಪಂ.ಇಒ ಕೆ.ಸಿ.ಅಪ್ಪಣ್ಣ, ವಿರಾಜಪೇಟೆ/ ಪೆÇನ್ನಂಪೇಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ತಾಂತ್ರಿಕ ಸಿಬ್ಬಂದಿಗಳು ಹಾಗೂ ತಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular