ಮಂಗಳೂರು(ದಕ್ಷಿಣ ಕನ್ನಡ): ಕಳೆದ ಹತ್ತು ವರ್ಷಗಳಿಂದ ರಕ್ತದಾನ ಶಿಬಿರ ಹಾಗೂ ಇತರ ಸಾಮಾಜಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ 400ನೇ ರಕ್ತದಾನ ಶಿಬಿರವು ಆಗಸ್ಟ್ 25ರಂದು ದುಬೈನಲ್ಲಿ ನಡೆಯಲಿದೆ.
ಇದಕ್ಕೆ ಪೂರಕವಾಗಿ ಆಗಸ್ಟ್ 27ರಂದು ದೇರಳಕಟ್ಟೆ ಪರಿಸರದಲ್ಲಿ 400 ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ನವಾಜ್ ನರಿಂಗಾನ ತಿಳಿಸಿದ್ದಾರೆ.
ಅವರು ಇಂದು ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.
ಕಳೆದ 10 ವರ್ಷಗಳಲ್ಲಿ 399 ರಕ್ತದಾನ ಶಿಬಿರಗಳ ಮೂಲಕ 3,5000ಕ್ಕೂ ಅಧಿಕ ಯುನಿಟ್ ರಕ್ತ ಸಂಗ್ರಹಿಸಿ ವಿವಿಧ ಆಸ್ಪತ್ರೆಗಳ ಮೂಲಕ ಅಗತ್ಯವುಳ್ಳವರಿಗೆ ನೀಡಲಾಗಿದೆ ಎಂದರು.