ಮಂಡ್ಯ: ಜಿಲ್ಲೆಯಲ್ಲಿ ಕಾವೇರಿ ಕಿಚ್ಚು ಮುಂದುವರೆದಿದ್ದು, ಕೆಆರ್ ಎಸ್ ಡ್ಯಾಂ ನಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಬೆಂ-ಮೈ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯದ ಸಂಜಯ್ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ತಮಿಳುನಾಡಿಗೆ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಕೆಲಕಾಲ ಹೆದ್ದಾರಿ ತಡೆದು ಧರಣಿ ಕುಳಿತು ತಮಿಳುನಾಡಿಗೆ ನೀರು ನಿಲ್ಲಿಸುವಂತೆ ಆಗ್ರಹಿಸಿದರು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆ ವೇಳೆ ಕೆಆರ್ ಎಸ್ ಡ್ಯಾಂ ಒಳಗೆ ನುಗ್ಗಲು ಯತ್ನಿಸಿದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಮುಖ್ಯ ದ್ವಾರದಲ್ಲೇ ತಡೆದಿದ್ದಾರೆ.
ಬ್ಯಾರಿಕೇಡ್ ಹಾಕಿ, ಪ್ರತಿಭಟನಾಕಾರರಿಗೆ ಪೊಲೀಸರು ತಡೆ ನೀಡಿದ್ದು, ಪೊಲೀಸರ ಜೊತೆ ಪ್ರತಿಭಟನಾಕಾರರು ವಾಗ್ವಾದ ನಡೆಸಿದ್ದಾರೆ. ತಡೆ.
ನೀರು ನಿಲ್ಲಿಸಿದ್ದಾರೋ? ಇಲ್ವೋ? ನೋಡಬೇಕು. ಒಳಗೆ ಹೋಗಲು ಅವಕಾಶ ಕೊಡಿ ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ನೀರಾವರಿ ಇಲಾಖೆಯ ಅನುಮತಿ ಬೇಕು. ಅವರೇ ಬರ್ತಾರೆ ಸ್ಪಷ್ಟನೆ ಕೊಡ್ತಾರೆ ಇರಿ ಎಂದು ಪೊಲೀಸರು ತಿಳಿಸಿದ್ದಾರೆ.
