ಮೈಸೂರು: ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಸಮಾರಂಭ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಸಿಎಂ ಸಿದ್ದರಾಮಯ್ಯ ಆಗಸ್ಟ್ 27ರಿಂದ 30 ರವರಗೆ ಮೈಸೂರು ಪ್ರವಾಸ ಕೈಗೊಂಡಿದ್ದಾರೆ.
ಆಗಸ್ಟ್ 27ರಂದು ರಾತ್ರಿ 8 ಗಂಟೆಗೆ ಆಗಮಿಸುವ ಅವರು ಸ್ಥಳೀಯ ಕಾರ್ಯ ಕ್ರಮದಲ್ಲಿ ಭಾಗವಹಿಸುವರು. ಆಗಸ್ಟ್ 28 ರ ಬೆಳಿಗ್ಗೆ 11 ಗಂಟೆಗೆ ಜಿ.ಪಂ. ಸಭಾಂಗಣದ ಲ್ಲಿ ಆಯೋಜಿಸಿರುವ ಕೆಡಿಪಿ ಸಭೆಯಲ್ಲಿ ಭಾಗವಹಿಸುವರು. ನಂತರ ಸಂಜೆ 5 ಗಂಟೆಗೆ ಸಿದ್ದಾರ್ಥನಗರದ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ರಾತ್ರಿ 7 ಗಂಟೆಗೆ ಹೋಟೆಲ್ ಜೆ.ಪಿ.ಪ್ಯಾಲೇಸ್ ನಲ್ಲಿ ಗಂಗೋತ್ರಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಆಗಸ್ಟ್ 29 ರಂದು ಬೆಳಿಗ್ಗೆ 10:30 ಕ್ಕೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಕಡಕೋಳ ಕೈಗಾರಿಕಾ ಪ್ರದೇಶದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 1,45ಕ್ಕೆ ಕೆ.ಆರ್.ಆಸ್ಪತ್ರೆಯ ಸುಟ್ಟ ಗಾಯಗಳ ನವೀಕರಣ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಮೈಸೂರು ಚಾಮರಾಜನಗರ ಶಾಸಕರುಗಳನ್ನು ಭೇಟಿ ಮಾಡಿ, ಸಂಜೆ 6 ಗಂಟೆಗೆ ವಕೀಲರುಗಳ ಸಂಘದ ಕಚೇರಿಗೆ ಭೇಟಿ ನೀಡುವರು.
ಆಗಸ್ಟ್ 30 ಬುಧವಾರ ಬೆಳಗ್ಗೆ 11 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಗೃಹ ಲಕ್ಷ್ಮಿ ಯೋಜನೆಯ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಮಧ್ಯಾಹ್ನ 3,50 ಕ್ಕೆ ಸಿದ್ದಲಿಂಗಪುರದ ಕನಕ ಭವನ ಉಧ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.