ಧಾರವಾಡ : ಜಿಲ್ಲೆಯಲ್ಲಿ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ ಎಂಬ ಮಾಹಿತಿಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ಜಿಲ್ಲೆಯಲ್ಲಿ ಬಿಜೆಪಿಗರು ಕಾಂಗ್ರೆಸ್ ಗೆ ಬರುತ್ತಿದ್ದಾರೆ. ಹಾಗೇ ಧಾರವಾಡ ಜಿಲ್ಲೆಯಲ್ಲಿ ಇಬ್ಬರು ಬಿಜೆಪಿಗರು ಕಾಂಗ್ರೆಸ್ ಪಕ್ಷಕ್ಕೆ ಬರ್ತಾರೆ. ಬಿಜೆಪಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಕುಂದಗೋಳ ಮಾಜಿ ಶಾಸಕ ಚಿಕ್ಕನಗೌಡ ಕಾಂಗ್ರೆಸ್ ಪಕ್ಷಕ್ಕೆ ಬರ್ತಾರೆ ಎಂದು ಮಾಹಿತಿಯಿದೆ ಎಂದು ಲಾಡ್ ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಬಿಜೆಪಿ ಅವಧಿಯ ಹಗರಣಗಳ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಯಾವ ಇಲಾಖೆಯಲ್ಲಿ ಹಗರಣ ಆಗಿದೆ ಎಲ್ಲವನ್ನು ತನಿಖೆ ಮಾಡಲಾಗುತ್ತಿದೆ. ವಿಪಕ್ಷದಲ್ಲಿದ್ದಾಗ ನಾವು ತನಿಖೆ ಮಾಡಲು ಒತ್ತಾಯ ಮಾಡಿದ್ದೇವೆ. ಆದರೆ ಈಗ ನಮ್ಮದೇ ಆಡಳಿತವಿದೆ ಅದಕ್ಕೆ ತನಿಖೆ ಮಾಡಲಾಗುತ್ತದೆ. ಅದರಲ್ಲೂ ಆರೋಗ್ಯ ಇಲಾಖೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಆಗಿದೆ ಎಂದು ಸಚಿವರು ಆರೋಪಿಸಿದರು.