Sunday, April 20, 2025
Google search engine

Homeರಾಜ್ಯಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಕಮೆಂಟ್​​: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು​...

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಕಮೆಂಟ್​​: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು​ ದಾಖಲು

ಶಿವಮೊಗ್ಗ: ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಉಪಾಧ್ಯಕ್ಷೆ ವಿರುದ್ಧ ಫೇಸ್ ​ಬುಕ್​ನಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್​​ ಮಾಡಿದ ಆರೋಪದಡಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಶಿವಮೊಗ್ಗದ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷೆ ಸೌಗಂಧಿಕಾ ರಘುನಾಥ್​ ಗೆ ಅವರಿಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಫೇಸ್ ​​ಬುಕ್ ​ನಲ್ಲಿ ಅವಾಚ್ಯ ಶಬ್ದದಿಂದ ನಿಂಧಿಸಿರುವ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಸೌಂಗಧಿಕಾ ಅವರು ಪಕ್ಷದ ಕಾರ್ಯಕರ್ತೆಯರೊಂದಿಗೆ ವಿನೋಬನಗರ ಪೊಲೀಸ್‌ ಠಾಣೆ ತೆರಳಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 504, 509ರ ಅಡಿ ಎಫ್​ಐಆರ್​ ದಾಖಲಾಗಿದೆ.

RELATED ARTICLES
- Advertisment -
Google search engine

Most Popular