Sunday, April 20, 2025
Google search engine

Homeರಾಜ್ಯಮಂಡ್ಯ: ಸರ್ಕಾರಿ ಶಾಲೆಯ ಹೈಟೆಕ್ ಶೌಚಾಲಯ ನಿರ್ಮಾಣ ಕಾಮಗಾರಿಗೆ ಚಾಲನೆ

ಮಂಡ್ಯ: ಸರ್ಕಾರಿ ಶಾಲೆಯ ಹೈಟೆಕ್ ಶೌಚಾಲಯ ನಿರ್ಮಾಣ ಕಾಮಗಾರಿಗೆ ಚಾಲನೆ

ಮಂಡ್ಯ: ಮಂಡ್ಯದ 4ನೇ ವಾರ್ಡಿನ ಶಂಕರ್ ಪುರದಲ್ಲಿರುವ ಸರ್ಕಾರಿ ಶಾಲೆಯ ಹೈಟೆಕ್ ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ಗಣಿಗ ರವಿಕುಮಾರ್ ಚಾಲನೆ ನೀಡಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯ ವಿವೇಕ ಯೋಜನೆ ಅಡಿ ಸುಮಾರು 7 ಲಕ್ಷದಲ್ಲಿ ವೆಚ್ಚದಲ್ಲಿ ಶೌಚಾಲಯ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದ್ದು, ಭೂಮಿ ಪೂಜೆ ನೆರವೇರಿಸಿ ಹೈಟೆಕ್ ಶೌಚಾಲಯ ಕಾಮಗಾರಿಗೆ ಚಾಲನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ಗಣಿಗ ರವಿಕುಮಾರ್, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡುವ ಯೋಜನೆ ನಮ್ಮದಾಗಿದೆ. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಯಲ್ಲಿ ಸಮಗ್ರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಹಾಗೂ ಕೊಠಡಿಗಳ ಮರು ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಪೂರ್ಣಿಮಾ, ನಹಿಮ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು ಸೇರಿ ಹಲವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular