ಹುಣಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯ ಡಿ.ಕೆ ಶಿವಕುಮಾರ್ ಅವರ ಜೋಡೆತ್ತಿನ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರ ಬ್ಯಾಂಕ್ ಉಳಿತಾಯ ಖಾತೆಗೆ ಪ್ರತಿ ತಿಂಗಳು 2000 ರೂ. ನಂತೆ ನೀಡುವ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕಾರ್ಯಕ್ರಮಕ್ಕೆ ಆ.30 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ನುಡಿದಂತೆ ನಡೆದ, ಭಾಗ್ಯಗಳ ಭಾಗ್ಯವಿದಾತ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ಹಾಗೂ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾ ಉಸ್ತುವಾರಿ ಮಂತ್ರಿ ಡಾ. ಎಚ್ ಸಿ ಮಹದೇವಪ್ಪ, ಪಶು ಸಂಗೋಪನ ಸಚಿವ ಕೆ ವೆಂಕಟೇಶ್ ಸೇರಿದಂತೆ ಹಲವು ನಾಯಕರು ಭಾಗವಹಿಸುತ್ತಿದ್ದು , ಹುಣಸೂರು ತಾಲೂಕಿನ ಸಮಸ್ತ ನಾಗರಿಕ ಬಂಧುಗಳನ್ನು ಗೃಹಲಕ್ಷ್ಮಿ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಮೇಲ್ಕಂಡ ಗಣ್ಯರು ಆಹ್ವಾನ ಮಾಡಿರುತ್ತಾರೆ. ಆದ್ದರಿಂದ ಹುಣಸೂರು ತಾಲೂಕಿನ ಸಮಸ್ತ ತಾಯಂದಿರು, ಅಕ್ಕ-ತಂಗಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹುಣಸೂರಿನ ಮಾಜಿ ಶಾಸಕ ಎಚ್ ಪಿ ಮಂಜುನಾಥ್ ಮನವಿ ಮಾಡಿದ್ದಾರೆ.
ಜೋಡೆತ್ತಿನ ನೇತೃತ್ವದ ಸರ್ಕಾರಕ್ಕೆ ಶತ ದಿನ ಸಂಭ್ರಮ
ನಾಡಿನ ಬಡವರ ಪಾಲಿನ ಅನ್ನದಾತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಗಳು,ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜೋಡೆತ್ತಿನ ನೇತೃತ್ವದ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ” 100 ದಿನಗಳು” ಪೂರೈಸುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಕಾಂಗ್ರೆಸ್ ಪಕ್ಷ ಹಾಗೂ ನಮ್ಮ ನಾಯಕರುಗಳ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು ರಾಜ್ಯದ 135 ಸ್ಥಾನಗಳಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ನಮ್ಮ ಪಕ್ಷ ಹಾಗೂ ನಾಯಕರುಗಳು ಮಾಡುತ್ತಿದ್ದಾರೆ.
ನಮ್ಮ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳಂತೆ ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜೊತೆಜೊತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡಿಸಿಕೊಂಡು ಹೋಗುತ್ತಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಸರ್ಕಾರದ ಪಯಣಕ್ಕೆ ಶತಕ ದಿನ ಪೂರೈಸುತ್ತಿರುವ ಸಂಭ್ರಮ.
ಈ ವಿಶೇಷ ಸಂದರ್ಭದಲ್ಲಿ ಚಾಮುಂಡೇಶ್ವರಿಯ ವರಪುತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ಹುಣಸೂರು ತಾಲೂಕಿನ ಪ್ರತಿಯೊಬ್ಬ ನಾಗರಿಕರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ಪ್ರೋತ್ಸಾಹ ಆಶೀರ್ವಾದ ನಿರಂತರವಾಗಿ ಕಾಂಗ್ರೆಸ್ ಪಕ್ಷದ ಮೇಲಿರಲಿ ಎಂದು ಹುಣಸೂರಿನ ಮಾಜಿ ಶಾಸಕರಾದ ಎಚ್ ಪಿ ಮಂಜುನಾಥ್ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.