ಮಂಡ್ಯ: ಕಾವೇರಿ ಪ್ರಾದಿಕಾರದಿಂದ ನೀರು ಬಿಡುಗಡೆಗೆ ಆದೇಶ ಖಂಡಿಸಿ ಜಿಲ್ಲೆಯಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ.
ಇಂದು ಜಿಲ್ಲಾ ರೈತ ಸಂಘದ ಕಾರ್ಯಕರ್ತರು ಬೆಂಗಳೂರು-ಮೈಸೂರು ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಮೈ- ಬೆಂ ಹೆದ್ದಾರಿ ಮದ್ಯೆ ಕುಳಿತು ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿದೆ.
ಕಾವೇರೀ ನೀರು ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾವುದೇ ಕಾರಣಕ್ಕೂ ನೀರು ಬಿಡದಂತೆ ರೈತರು ಆಗ್ರಹಿಸಿದ್ದು, ನೀರು ಬಿಟ್ಟರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರೈತರ ಪ್ರತಿಭಟನೆಯಿಂದ ಮೈ- ಬೆಂ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿದೆ.
ಪ್ರತಿಭಟನಾ ಸ್ಥಳದಲ್ಲಿ ಪೊಲೀಸರ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಡಿ.ಆರ್.ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.