Sunday, April 20, 2025
Google search engine

Homeಅಪರಾಧಅಗ್ನಿ ಅವಘಡ: ನಾಲ್ವರು ಸಾವು

ಅಗ್ನಿ ಅವಘಡ: ನಾಲ್ವರು ಸಾವು

ಮಹಾರಾಷ್ಟ್ರ: ನಗರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ನಾಲ್ವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂದು ಬೆಳಗ್ಗೆ ಪೂರ್ಣನಗರ ಚಿಂಚ್‌ವಾಡ್‌ನಲ್ಲಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುತ್ತಮುತ್ತಲಿನ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದೆ.

ಇನ್ನು ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಕೈಗೊಂಡರು. ಬಳಿಕ ಬೆಂಕಿಯನ್ನು ನಿಯಂತ್ರಿಸುವಲ್ಲಿ ಸಿಬ್ಬಂದಿ ಯಶಸ್ವಿಯಾದರು. ಅಗ್ನಿಶಾಮಕ ದಳದ ಸಿಬ್ಬಂದಿ ನಾಲ್ಕು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದು ಬರಬೇಕಿದೆ.

ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಮೃತರನ್ನ ೨೫ ವರ್ಷದ ದ್ಯಾಮಪ್ಪ ಓಲೇಕಾರ, ೨೮ ವರ್ಷದ ರಮೇಶ್ ಬಾರ್ಕಿ ಮತ್ತು ೨೨ ವರ್ಷದ ಶಿವಲಿಂಗ ಅಕ್ಕಿ ಎಂದು ಗುರುತಿಸಲಾಗಿದೆ. ಮೃತರು ಬ್ಯಾಡಗಿ ತಾಲೂಕಿನ ಕಾಟೇನಹಳ್ಳಿ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ. ಮೃತದೇಹಗಳು ಪತ್ತೆಯಾಗುತ್ತಿದ್ದಂತೆ ಮೃತರ ಸಂಬಂಧಿಕರ ಅಕ್ರಂದನ ಮುಗಿಲುಮುಟ್ಟಿದೆ.
ಸುದ್ದಿ ಗೊತ್ತಾಗುತ್ತಿದೆಯಂತೆ ಜಿಲ್ಲಾಧಿಕಾರಿ ರಘುನಂದಮೂರ್ತಿ, ಎಸ್ಪಿ ಶಿವಕುಮಾರ್ ಗುಣಾರೆ ಸೇರಿದಂತೆ ವಿವಿಧ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

RELATED ARTICLES
- Advertisment -
Google search engine

Most Popular